ಮಂಗಳವಾರ, ನವೆಂಬರ್ 24, 2020
22 °C
ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ದಾಳಿ

600 ಕ್ವಿಂಟಲ್‌ ಅನ್ನಭಾಗ್ಯ ಅಕ್ಕಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಬ್ರಹ್ಮಾವರ ತಾಲ್ಲೂಕು ಶಿರಿಯಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಮರ್ಗಿಯ ರೈಸ್ ಮಿಲ್ ಮೇಲೆ ಶನಿವಾರ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ಅನ್ನಬಾಗ್ಯ ಯೋಜನೆಯ 600 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಅನ್ನಬಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ. ಗೋದಾಮುಗಳಲ್ಲಿ ದಾಸ್ತಾನು ಮಾಡಲಾಗುತ್ತಿದೆ ಎಂಬ ದೂರುಗಳು ವ್ಯಾಪಕವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿ, ₹ 16.5 ಲಕ್ಷ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಮೂವರು ಲಾರಿ ಚಾಲಕರು ಹಾಗೂ ಕ್ಲೀನರ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 6 ಲಾರಿ, ಎರಡು 407, ಒಂದು ಟಾಟಾ 909 ಹಾಗೂ  ಮಾರುತಿ ಇಕೋ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಜಿಲ್ಲೆಯಲ್ಲಿ ಪಡಿತರ ಧಾನ್ಯವನ್ನು ದಾಸ್ತಾನುಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಜಾಲ ಸಕ್ರಿಯವಾಗಿದ್ದು, ಕಳೆದ ತಿಂಗಳು ಕುಂದಾಪುರ ತಾಲ್ಲೂಕಿನಲ್ಲಿ ದಂಧೆಕೋರರನ್ನು ಬಂಧಿಸಲಾಗಿತ್ತು. ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಹಾಗೂ ಸಾಗಾಟ ಮಾಡುವುದು ಕಂಡುಬಂದರೆ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಜತೆಗೆ, ಸಾರ್ವಜನಿಕರು ಸರ್ಕಾರದಿಂದ ಅನ್ನಭಾಗ್ಯ ಯೋಜನೆಯಡಿ ಸಿಗುವ ಅಕ್ಕಿಯನ್ನು ಮಾರಾಟ ಮಾಡದೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ದಾಳಿಯಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕ ಗಜೇಂದ್ರ, ಆಹಾರ ನಿರೀಕ್ಷಕಿ ಪಾರ್ವತಿ, ಸುರೇಶ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು