ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8.80 ಕೆ.ಜಿ ಗಾಂಜಾ ವಶ: ಇಬ್ಬರ ಬಂಧನ

₹ 6.91 ಲಕ್ಷ ಮೌಲ್ಯದ ಸ್ವತ್ತುಗಳು ವಶ
Last Updated 25 ಸೆಪ್ಟೆಂಬರ್ 2019, 13:31 IST
ಅಕ್ಷರ ಗಾತ್ರ

ಉಡುಪಿ: ಈಶ್ವರ ನಗರ ವಾರ್ಡ್‌ನ ಹೆರ್ಗ ಗ್ರಾಮದ ಮನೆಯೊಂದರಲ್ಲಿ ಗಾಂಜಾ ಸಂಗ್ರಹಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಪಿಯೂಷ್ ಅಗರ್‌ವಾಲ್ (20), ರಿಷಬ್ ರಾಜ್‌ಸಿಂಗ್ (21) ಬಂಧಿತರು. ಆರೋಪಿಗಳು ಮನೆಯಲ್ಲಿ ಸಂಗ್ರಹಿಸಿದ್ದ ₹ 3,50 ಲಕ್ಷ ಮೌಲ್ಯದ 8.830 ಕೆ.ಜಿ ಗಾಂಜಾ, ₹ 3.15 ಲಕ್ಷ ನಗದು, ತೂಕ ಮಾಡುವ ಸಾಧನ, ಮೂರು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ ವಶಪಡಿಸಿಕೊಂಡ ಸ್ವತ್ತುಗಳ ಮೌಲ್ಯ ₹ 6.91 ಲಕ್ಷ ಎಂದು ಅಂದಾಜಿಸಲಾಗಿದೆ.

ಆರೋಪಿಗಳನ್ನು ಅ.5ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೆನ್ ಅಪರಾಧ ಠಾಣೆಯ ಇನ್‌ಸ್ಪೆಕ್ಟರ್ ಪಿ.ಸೀತಾರಾಮ, ಪಿಎಸ್ಐ ಲಕ್ಷ್ಮಣ, ನಾರಾಯಣ, ಎಎಸ್ಐ ಕೇಶವ ಗೌಡ, ಸಿಬ್ಬಂದಿ ಕೃಷ್ಣಪ್ರಸಾದ್, ಜೀವನ್, ಸಂಜಯ್, ಶ್ರೀಧರ್, ರಾಘವೇಂದ್ರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT