ಬುಧವಾರ, ಜುಲೈ 15, 2020
27 °C
ಬಸ್‌ ಚಾಲಕರು, ಬಟ್ಟೆ ಅಂಗಡಿ ಮಾಲೀಕನಿಗೂ ಸೋಂಕು

ಉಡುಪಿ: 9 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಇಬ್ಬರು ಬಸ್‌ ಚಾಲಕರು ಹಾಗೂ ಒಬ್ಬರು ಬಟ್ಟೆ ಅಂಗಡಿ ಮಾಲೀಕ ಸೇರಿ ಮಂಗಳವಾರ 9 ಜನರಲ್ಲಿ ಕೋವಿಡ್‌–19 ಸೋಂಕು ಕಾಣಿಸಿಕೊಂಡಿದೆ.

ಸೋಂಕಿತರಲ್ಲಿ ಮೂವರು ಮುಂಬೈನಿಂದ, ಒಬ್ಬರು ಹೈದರಾಬಾದ್‌ನಿಂದ ಹಾಗೂ ಅಂತರ ಜಿಲ್ಲಾ ಪ್ರಯಾಣ ಮಾಡಿದ ಮೂವರಿಗೆ ಹಾಗೂ ಸ್ಥಳೀಯ ಸೋಂಕಿತನ ಜತೆಗಿನ ಪ್ರಾಥಮಿಕ ಸಂಪರ್ಕದಿಂದ ಇಬ್ಬರಿಗೆ ಸೋಂಕು ತಗುಲಿದೆ.

ಬಸ್‌ ಚಾಲಕರಿಗೆ ಕೊರೊನಾ: ಕುಂದಾಪುರ–ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಬಸ್‌ಗಳಲ್ಲಿ ಕಾರ್ಯ ನಿರ್ವಹಿಸುವ ಇಬ್ಬರು ಚಾಲಕರಿಗೆ ಸೋಂಕು ತಗುಲಿದೆ. ಬಟ್ಟೆ ಅಂಗಡಿ ಮಾಲೀಕರೊಬ್ಬರಿಗೆ ಸೋಂಕು ದೃಢಪಟ್ಟಿದ್ದು, ಅವರ ಪುತ್ರ ಬೆಂಗಳೂರಿಗೆ ಹೋಗಿಬಂದಿರುವುದರಿಂದ ಗಂಟಲ ದ್ರವವನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಈ ಮೂರು ಪ್ರಕರಣಗಳ ಬಗ್ಗೆ ಬಹಳ ಎಚ್ಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

288 ಮಾದರಿ ಸಂಗ್ರಹ: ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಬಂದ, ಶೀತ ಜ್ವರದ ಲಕ್ಷಣಗಳಿದ್ದ 288 ಜನರ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. 15 ಮಂದಿ ಐಸೊಲೇಷನ್‌ ವಾರ್ಡ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1206ಕ್ಕೇರಿಕೆಯಾಗಿದೆ. ಸೋಂಕಿಗೆ ಮೂವರು ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು