ಗುರುವಾರ , ಆಗಸ್ಟ್ 5, 2021
21 °C

ಉಡುಪಿ | 135 ಜನರಿಗೆ ಕೋವಿಡ್‌, 98 ಮಂದಿಗೆ ಹೋಂ ಐಸೊಲೇಷನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಾನುವಾರ 135 ಮಂದಿಗೆ ಕೋವಿಡ್–19 ದೃಢಪಟ್ಟಿದೆ.

ಉಡುಪಿ ತಾಲ್ಲೂಕಿನ 60, ಕುಂದಾಪುರದ 52, ಕಾರ್ಕಳದ 23 ಮಂದಿಗೆ ಸೋಂಕು ತಗುಲಿದ್ದು, 70 ಪುರುಷರು, 55 ಮಹಿಳೆಯರು ಹಾಗೂ 10 ಮಕ್ಕಳು ಸೇರಿದ್ದಾರೆ.

ಮಂಗಳೂರು ಪ್ರಯಾಣ ಹಿನ್ನೆಲೆಯ ಮೂವರು, ಬೆಂಗಳೂರು ಪ್ರಯಾಣ ಹಿನ್ನೆಲೆಯ ನಾಲ್ವರು, ದುಬೈ, ಚೆನ್ನೈ ಮುಂಬೈ ಪ್ರಯಾಣ ಹಿನ್ನೆಲೆಯ ಮೂವರಿಗೆ ಹಾಗೂ ಶೀತ‌ಜ್ವರ ಲಕ್ಷಣಗಳಿದ್ದ 31, ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದ ಐವರಿಗೆ ಹಾಗೂ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 89 ಜನರಿಗೆ ಸೋಂಕು ತಗುಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಭಾನುವಾರ 42 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 98 ಸೋಂಕಿತರಿಗೆ ಹೋಂ ಐಸೊಲೇಷನ್‌ನಲ್ಲಿ ಇರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ ಹಾಗೂ ತೀವ್ರ ಉಸಿರಾಟದ ಸಮಸ್ಯೆಗಳು ಕಂಡುಬಂದ 455 ಜನರ ಗಂಟಲದ್ರವದ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. 509 ವರದಿಗಳು ಬರುವುದು ಬಾಕಿ ಇದೆ.

ಸೋಂಕಿನ ಲಕ್ಷಣಗಳು ಕಂಡುಬಂದ 27 ಜನರನ್ನು ಐಸೊಲೇಷನ್ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,222ಕ್ಕೇರಿಕೆಯಾಗಿದ್ದು, 584 ಸಕ್ರಿಯ ಪ್ರಕರಣಗಳಿವೆ. 10 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು