ಬುಧವಾರ, ಜುಲೈ 28, 2021
29 °C

ಕುಂದಾಪುರ | 163 ಬಾರಿ ಕ್ವಾರಂಟೈನ್ ನಿಯಮ ಉಲ್ಲಂಘಸಿದ ವ್ಯಕ್ತಿ ವಿರುದ್ಧ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಂದಾಪುರ: ಹೋಂಕ್ವಾರಂಟೈನಲ್ಲಿ ಇದ್ದ ವ್ಯಕ್ತಿ 163 ಬಾರಿ ನಿಯಮ ಉಲ್ಲಂಘಿಸಿ, ಹೊರಗಡೆ ತಿರುಗಾಡಿದ್ದು, ಇಲ್ಲಿನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್‌ 29 ರಂದು ಮುಂಬೈಯಿಂದ ಕೋಟೇಶ್ವರದ ಬಾಡಿಗೆ ಮನೆಗೆ ಬಂದಿದ್ದ ಸಹಬ್‌ ಸಿಂಗ್‌  ಎಂಬುವರಿಗೆ ಜುಲೈ 13 ರವರೆಗೆ ಹೋಂಕ್ವಾರಂಟೈನ್‌ಗೆ  ಸೂಚಿಸಲಾಗಿತ್ತು. ಆದರೆ ಈ ಅವಧಿಯಲ್ಲಿ ನಿಯಮ ಉಲ್ಲಂಘಿಸಿ, ಉಡುಪಿಯ ಹೋಟೆಲ್‌ಗ‌ಳಿಗೆ ತಿರುಗಾಡುತ್ತಿರುವುದು ಸೇರಿ ಒಟ್ಟು 163 ಬಾರಿ ನಿಯಮ ಬಾಹಿರವಾಗಿ ಹೊರಗೆ ಬಂದ ಬಗ್ಗೆ ಮೊಬೈಲ್ ಜಿಪಿಎಸ್‌ ಟ್ರ್ಯಾಕರ್‌ನಿಂದ ತಿಳಿದು ಬಂದಿತ್ತು. ಹೀಗಾಗಿ ಪ್ರಕರಣ ದಾಖಲಾಗಿದೆ.

ನಿಯಮಾವಳಿಗಳ ಉಲ್ಲಂಘನೆ ಮಾಡಿರುವ ಬಗ್ಗೆ ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎನ್‌.ಜಿ. ಭಟ್‌ ಅವರು ಕುಂದಾಪುರ ಠಾಣೆಗೆ ದೂರು ನೀಡಿದ್ದು, ಅವರ ದೂರಿನಂತೆ ಸಹಬ್‌ ಸಿಂಗ್‌ ವಿರುದ್ಧ ಐಪಿಸಿ ಸೆಕ್ಷನ್‌ 269, 270 ರಡಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು