ಕುಂದಾಪುರ: ಇಲ್ಲಿನ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕುಂದಾಪುರ ತಾಲ್ಲೂಕು ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ದಿ.ಪುಳಿಮಾರು ಎಂ. ಕೃಷ್ಣಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಅಂಕಣಕಾರ್ತಿ ವಸಂತಿ ಶೆಟ್ಟಿ ಮಾತನಾಡಿ, ಯಕ್ಷಗಾನ ಕಲೆ ಕನ್ನಡದ ಸಂಸ್ಕಾರ, ಸಂಸ್ಕೃತಿಯನ್ನು ಬಿಂಬಿಸುತ್ತದೆ. ಯಕ್ಷಗಾನದಲ್ಲಿ ಮಾತ್ರ ಸ್ಪಷ್ಟ ಕನ್ನಡ ಕಾಣಬಹುದು’ ಎಂದರು.

ಪ್ರಾಂಶುಪಾಲ ಪ್ರೊ.ಕೆ ಉಮೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ‘ಸಾಹಿತ್ಯ, ಕ್ರೀಡೆ, ಶಿಕ್ಷಣ, ಸಂಸ್ಕೃತಿ, ಉದ್ಯೋಗ ಒಳಗೊಂಡ ಪಂಚಮುಖಿ ಶಿಕ್ಷಣವನ್ನು ನಮ್ಮ ಸಂಸ್ಥೆಯಲ್ಲಿ ಬೋಧಿಸಲಾಗುತ್ತದೆ’ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಪರಿಷತ್ನ ಕುಂದಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಉಮೇಶ್ ಪುತ್ರನ್ ಆಶಯ ನುಡಿಗಳನ್ನಾಡಿದರು. ಕಸಾಪ ತಾಲ್ಲೂಕು ಕಾರ್ಯದರ್ಶಿ ದಿನಕರ್ ಆರ್. ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ, ಕೋಶಾಧಿಕಾರಿ ಮನೋಹರ ಪಿ, ದತ್ತಿದಾನಿ ಉಡುಪಿ ಪುಳಿಮಾರುಮನೆ ಭವಾನಿ ವಿ. ಶೆಟ್ಟಿ, ಕನ್ನಡ ಸಂಘದ ಸಹ ಸಂಯೋಜಕಿ ಶ್ವೇತಾ ಬಿ ಇದ್ದರು.

ಗೋಳಿಗರಡಿ ಮೇಳದ ಹಿರಿಯ ಕಲಾವಿದ ಹಟ್ಟಿಯಂಗಡಿ ಬಸವ ಅವರಿಗೆ ಯಕ್ಷಪ್ರೇಮಿ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರ ನೀಡಲಾಯಿತು. ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿದರು, ಉಪನ್ಯಾಸಕಿ ರೇಷ್ಮಾ ಶೆಟ್ಟಿ ಪರಿಚಯಿಸಿದರು, ಕನ್ನಡ ಸಂಘದ ಸಂಯೋಜಕ ಸುಕುಮಾರ್ ಶೆಟ್ಟಿ ಕಮಲಶಿಲೆ ವಂದಿಸಿದರು. ಪ್ರವೀಣಾ.ಎಂ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.