ಸೋಮವಾರ, ಅಕ್ಟೋಬರ್ 18, 2021
28 °C

ಉಡುಪಿ: ಯುವತಿಯನ್ನು ಕೊಂದಿದ್ದ ಯುವಕನೂ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಸಂತೆಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವತಿಗೆ ಚೂರಿ ಇರಿದು, ತಾನೂ ಕುತ್ತಿಗೆ ಕುಯ್ದುಕೊಂಡಿದ್ದ ಯುವಕ ಮಂಗಳವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಅಲೆವೂರಿನ ಸಂದೇಶ್‌ ಕುಲಾಲ್‌ (28) ಮೃತ ಯುವಕ. ಪ್ರೇಮವೈಫಲ್ಯದಿಂದ ತೀವ್ರ ಮನನೊಂದಿದ್ದ ಸಂದೇಶ್‌ ಸೋಮವಾರ ಸಂಜೆ ಬೈಕ್‌ನಲ್ಲಿ ಹೋಗುತ್ತಿದ್ದ ಸೌಮ್ಯಶ್ರೀ ವಿಠಲ ಭಂಡಾರಿ ಅವರನ್ನು ಅಡ್ಡಗಟ್ಟಿ ಮನಬಂದಂತೆ ಚಾಕುವಿನಿಂದ ಇರಿದಿದ್ದ. ಬಳಿಕ ತಾನೂ ಇರಿದುಕೊಂಡಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನೂ ಸ್ಥಳೀಯರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು.‌

ಇದನ್ನೂ ಓದಿ: 

ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸೌಮ್ಯಶ್ರೀ ಮೃತಪಟ್ಟಿದ್ದರು. ಮಂಗಳವಾರ ಸಂದೇಶ್ ಕೂಡ ಮೃತಪಟ್ಟಿದ್ದು, ಬದುಕಿ ಬಾಳಬೇಕಾದ ಎರಡು ಜೀವಗಳು ದುರಂತ ಅಂತ್ಯಕಂಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು