ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ | ಹಾಸ್ಟೆಲ್ ಸೀಟು ಹಂಚಿಕೆ ವಿಳಂಬ: ಎಬಿವಿಪಿ ಪ್ರತಿಭಟನೆ

‘ವಿದ್ಯಾಸಿರಿ, ಕಾರ್ಮಿಕರ ನಿಧಿ ವಿದ್ಯಾರ್ಥಿವೇತನ ಬಿಡುಗಡೆಯಾಗುತ್ತಿಲ್ಲ’
Published 4 ಜುಲೈ 2024, 5:32 IST
Last Updated 4 ಜುಲೈ 2024, 5:32 IST
ಅಕ್ಷರ ಗಾತ್ರ

ಉಡುಪಿ: ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಮತ್ತು ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನವನ್ನು ನೀಡುತ್ತಿಲ್ಲ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಉಡುಪಿ ನಗರ ಘಟಕದ ವತಿಯಿಂದ  ನಗರದ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಬುಧವಾರ ಪ್ರತಿಭಟನೆ ನಡೆಯಿತು.

ಎಬಿವಿಪಿ ಉಡುಪಿ ನಗರ ಘಟಕದ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ, ಉಡುಪಿಯಂತಹ ನಗರಕ್ಕೆ ಶಿಕ್ಷಣಕ್ಕಾಗಿ ಸಾವಿರಾರು ವಿದ್ಯಾರ್ಥಿಗಳು ಹೊರ ಜಿಲ್ಲೆಗಳಿಂದ ಬರುತ್ತಾರೆ. ಈಗಾಗಲೇ ಹೈಸ್ಕೂಲ್ ಮತ್ತು ಪಿಯುಸಿ ತರಗತಿಗಳು ಪ್ರಾರಂಭವಾಗಿ 40 ದಿನಗಳಾಗುತ್ತಾ ಬಂದರೂ ಇನ್ನು ಸಹ ಹಾಸ್ಟೆಲ್ ಸೀಟು ಹಂಚಿಕೆ ಪ್ರಕ್ರಿಯೆ ಪ್ರಾರಂಭವಾಗದೇ ಇರುವುದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದರು.

ವಿದ್ಯಾಸಿರಿ, ಕಾರ್ಮಿಕರ ನಿಧಿ ವಿದ್ಯಾರ್ಥಿ ವೇತನ ಸಹ ಬಿಡುಗಡೆಯಾಗುತ್ತಿಲ್ಲ ಇದು ಖಂಡನೀಯ ಎಂದರು.  

ತಾಲ್ಲೂಕು ಘಟಕ ಸಂಚಾಲಕ ಅಜಿತ್ ಜೋಗಿ ಮಾತನಾಡಿ 100 ವಿದ್ಯಾರ್ಥಿಗಳು ಹಾಸ್ಟೆಲ್‌ಗಾಗಿ ನೋಂದಾಯಿಸಿದರೆ ಕೇವಲ 40 ವಿದ್ಯಾರ್ಥಿಗಳಿಗೆ ಮಾತ್ರ ವಸತಿ ವ್ಯವಸ್ಥೆ ಆಗುತ್ತಿದೆ ಎಂದರು.

ವಿಭಾಗ ಸಂಚಾಲಕ ಗಣೇಶ್ ಪೂಜಾರಿ, ಜಿಲ್ಲಾ ಸಂಚಾಲಕ ಕಾರ್ತಿಕ್ ಎಂ., ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸಂಹಿತಾ, ನಗರ ಸಹ-ಕಾರ್ಯದರ್ಶಿ ಭಾವನಾ, ಭೂಷಣ್, ಮನು, ಮಾಣಿಕ್ಯ, ಸ್ವಸ್ತಿಕ್, ನವೀನ್, ಅನಂತಕೃಷ್ಣ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT