ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಡಿಕ್ಕಿ: ಉದ್ಯಮಿ ಸಾವು

Last Updated 17 ಜನವರಿ 2023, 6:07 IST
ಅಕ್ಷರ ಗಾತ್ರ

ಕಾಪು (ಪಡುಬಿದ್ರಿ): ಮೂಳೂರಿನಲ್ಲಿ ಭಾನುವಾರ ಸಂಜೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಮೃತರನ್ನು ಮುಂಬೈಯ ಉದ್ಯಮಿ ಬಾಲಕೃಷ್ಣ ಜಿ. ಪೂಜಾರಿ (60) ಎಂದು ಗುರುತಿಸಲಾಗಿದೆ. ಇವರು ಅಂಗಡಿಗೆ ತೆರಳಿ, ಅಲ್ಲಿಂದ ಮನೆಗೆ ವಾಪಸ್ಸಾಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಬಿಲ್ಲವರ ಸಂಘದ ಮುಂಭಾಗದ ಮನೆ ಸಮೀಪದಲ್ಲೇ ಕಾರು ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯವಾಗಿದ್ದ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಪುತ್ರಿ ಇದ್ದಾರೆ. ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವಾಧ್ಯಕ್ಷರಾಗಿದ್ದರು. ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದು, ಸ್ವಗೃಹ ಮೂಳೂರು ಶಶಿಭವನದಲ್ಲಿ ವಾಸವಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT