ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಗೊಂದಲಕಾರಿ ಸುದ್ದಿ ಪ್ರಸಾರ ಮಾಡಿದರೆ ಕ್ರಮ; ಜಿ.ಜಗದೀಶ್

ಅನಧಿಕೃತ ವೆಬ್‌ಸೈಟ್‌ಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
Last Updated 7 ಸೆಪ್ಟೆಂಬರ್ 2020, 15:27 IST
ಅಕ್ಷರ ಗಾತ್ರ

ಉಡುಪಿ: ಸ್ಥಳೀಯ ವಾಹಿನಿ ಹಾಗೂ ಸಾಮಾಜಿಕ ತಾಣಗಳು ಸಮಾಜದಲ್ಲಿ ಗೊಂದಲ ಉಂಟುಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೇಬಲ್ ಟೆಲಿವಿಷನ್ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಪಪ್ರಚಾರದಿಂದ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೆ ಸಾರ್ವಜನಿಕರು ಅಸಹಕಾರ ತೋರುತ್ತಿದ್ದಾರೆ. ಪರಿಣಾಮ, ಆರೋಗ್ಯ ಸ್ಥಿತಿ ಗಂಭೀರವಾಗುತ್ತಿರುವ ರೋಗಿಗಳ ಸಂಖ್ಯೆ ಅಧಿಕವಾಗುತ್ತಿದ್ದು, ಐಸಿಯು ಬೆಡ್‌ಗಳ ಕೊರತೆಯಾಗಿದೆ ಎಂದು ಡಿಸಿ ವಿಷಾದ ವ್ಯಕ್ತಪಡಿಸಿದರು.‌

ಜಿಲ್ಲೆಯಲ್ಲಿ ಅನಧಿಕೃತ ನ್ಯೂಸ್ ವೆಬ್‌ಸೈಟ್‌ಗಳು ಆರಂಭಗೊಂಡಿದ್ದು, ಸುದ್ದಿಗಳ ಸತ್ಯಾಸತ್ಯತೆ ಪರಾಮರ್ಶೆ ಮಾಡದೆ ಹರಿ ಬಿಡಲಾಗುತ್ತಿದೆ. ಅನಧಿಕೃತ ನ್ಯೂಸ್ ವೆಬ್‌ಸೈಟ್‌ಗಳನ್ನು ನಿಷೇಧಿಸುವಂತೆ ಮನವಿಗಳು ಬಂದಿದ್ದು, ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿನ ಸ್ಥಳೀಯ ಕೇಬಲ್ ಟಿವಿಗಳು ಸಹ ಮನರಂಜನೆ ಹೊರತುಪಡಿಸಿ, ನ್ಯೂಸ್ ಪ್ರಸಾರ ಮಾಡಲು ಅನುಮತಿ ಪಡೆದಿದ್ದರೆ ಚಾನೆಲ್‌ಗಳ ಮುಖ್ಯಸ್ಥರು ದಾಖಲೆಗಳನ್ನು ಹಾಜರುಪಡಿಸಲು ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಕಾಯ್ದೆ ಉಲ್ಲಂಘಿಸಿದರೆ ಕೇಬಲ್ ಆಪರೇಟರ್‌ಗಳ ಉಪಕರಣಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಗ್ರಾಹಕರಿಂದ ಹೆಚ್ಚಿನ ಕೇಬಲ್‌ ದರ ಪಡೆಯುತ್ತಿರುವ ದೂರುಗಳಿದ್ದು, ಈ ಬಗ್ಗೆ ಪರಿಶೀಲಿಸುವಂತೆ ಸಮಿತಿಯ ಸದಸ್ಯೆ ತಾರಾ ತಿಮ್ಮಯ್ಯ ತಿಳಿಸಿದರು. ಹೆಚ್ಚಿನ ದರ ಪಡೆಯುವ ಬಗ್ಗೆ ಮತ್ತು ಕೇಬಲ್ ವಾಹಿನಿಗಳಲ್ಲಿ ಅನಪೇಕ್ಷಿತ ಕಾರ್ಯಕ್ರಮ ಪ್ರಸಾರವಾಗುತ್ತಿರುವ ಬಗ್ಗೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆರಂಭಿಸಿರುವ ದೂರು ಕೋಶ ದೂರವಾಣಿ: 2985242, ಇ ಮೇಲ್, varthabhavanaudupi@gmail.com ಗೆ ಸಾರ್ವಜನಿಕರು ಲಿಖಿತ ದೂರು ದಾಖಲಿಸಬಹುದು ಎಂದು ವಾರ್ತಾಧಿಕಾರಿ ಮಂಜುನಾಥ್ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಡುಪಿ ಸಹಾಯಕ ಅಂಚೆ ಅಧೀಕ್ಷಕ ಕೆ.ವಿ.ಭಟ್, ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರಶೆಟ್ಟಿ, ಮನಶಾಸ್ತ್ರಜ್ಞ ವಿರೂಪಾಕ್ಷ ದೇವರಮನೆ, ವಿಶ್ವಾಸದ ಮನೆಯ ಫಾಸ್ಟರ್ ಸುನೀಲ್ ಜಾನ್ ಡಿಸೋಜಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT