ಪಡುಬಿದ್ರಿ: ಎಲ್ಲೂರಿನಲ್ಲಿ ಕಾರ್ಯಾಚರಿಸುತ್ತಿರುವ ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್ನ ಸಿಎಸ್ಆರ್ ಅನುದಾನದಡಿ ₹17 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಬೆಳಪು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡುಬಿದ್ರಿ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಲಾಯಿತು.

ಅದಾನಿ ಸಂಸ್ಥೆ ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿ, ಬೆಳಪು ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಂಕ್ರೀಟೀಕರಣಗೊಳಿಸುವುದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಕೈಗಾರಿಕಾ ಪ್ರದೇಶದ ಅಭಿವೃದ್ಧಿ ಜೊತೆಗೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಕೃಷಿ ವಿಶ್ವವಿದ್ಯಾನಿಲಯ ಬೆಳಪು ಗ್ರಾಮದಲ್ಲಿ ಸ್ಥಾಪನೆಯಾಗಿರುವುದರಿಂದ ವಿಶೇಷ ರೈಲು, ರೈಲ್ವೆ ಪ್ರಯಾಣಿಕರ ಸಂಖ್ಯೆ ಮುಂಬರುವ ದಿನಗಳಲ್ಲಿ ಹೆಚ್ಚಲಿದೆ. ರೈಲ್ವೆ ನಿಲ್ದಾಣ ಸಂಪರ್ಕ ರಸ್ತೆ ಅಭಿವೃದ್ಧಿ ಸಮರ್ಪಕವಾಗಿದೆ ಎಂದರು.

ಅದಾನಿ ಸಂಸ್ಥೆಯು ಸಿಎಸ್ಆರ್ ಯೋಜನೆಯಡಿ ಉಡುಪಿ ಉಷ್ಣ ವಿದ್ಯುತ್ ಸ್ಥಾವರದ ನೆರೆ ಗ್ರಾಮಗಳಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದು, ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಅಭಿವೃದ್ಧಿ, ಗ್ರಾಮೀಣ ಕ್ರೀಡೆ, ಕಲೆ ಮತ್ತು ಸಂಸ್ಕೃತಿಗೆ ಉತ್ತೇಜನ ನೀಡುವ ಕೆಲಸಗಳನ್ನು ಅನುಷ್ಠಾನಗೊಳಿಸಿದೆ. ಬೆಳಪು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ, ಶಿಕ್ಷಣ ಯೋಜನೆ ಹೊರತುಪಡಿಸಿ ಮೂಲಸೌಕರ್ಯ ಅಭಿವೃದ್ಧಿಗೆ ₹3 ಕೋಟಿ ಅನುದಾನ ಘೋಷಿಸಿದ್ದು, ಈವರೆಗೆ ₹2 ಕೋಟಿಯಷ್ಟು ಮೊತ್ತದ ಅಭಿವೃದ್ಧಿ ಕೆಲಸಗಳನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.

ಬೆಳಪು ಗ್ರಾ.ಪಂ. ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಪಡುಬಿದ್ರಿ ರೈಲ್ವೆ ನಿಲ್ದಾಣಕ್ಕೆ ಹೋಗಿ ಬರಲು ಒಂದು ಸಂಪರ್ಕ ರಸ್ತೆಯಿದ್ದು, ಅದು ತೀರ ದುಃಸ್ಥಿತಿಯಲ್ಲಿತ್ತು. ರೈಲ್ವೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಲಾಗಿತ್ತು. ಸೂಕ್ತ ಸ್ಪಂದನೆ ದೊರೆಯದ ಕಾರಣ ಅದಾನಿ ಸಂಸ್ಥೆಯ ಸಿಎಸ್ಆರ್ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಮಾಡಲು ಪಂಚಾಯಿತಿ ನಿರ್ಣಯಿಸಿದ್ದು, 2024–25ರ ವಾರ್ಷಿಕ ಕ್ರಿಯಾ ಯೋಜನೆಯಡಿ ಈ ಕಾಮಗಾರಿ ಅನುಷ್ಠಾನಗೊಳಿಸಬೇಕೆಂದು ಅದಾನಿ ಫೌಂಡೇಷನ್ಗೆ ಮಾನವಿ ಮಾಡಿದ್ದೆವು ಎಂದು ತಿಳಿಸಿದರು.

ಕೊಂಕಣ ರೈಲ್ವೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಧಾ ಕೃಷ್ಣಮೂರ್ತಿ ಮಾತನಾಡಿದರು. ಬೆಳಪು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಭಟ್, ಸದಸ್ಯರಾದ ಶರತ್ ಕುಮಾರ್, ಸುಲೈಮಾನ್, ಉಷಾ, ಸೌಮ್ಯಾ, ಮಹೇಶ್ ಶೆಟ್ಟಿ, ಅದಾನಿ ಸಂಸ್ಥೆ ಎಜಿಎಂ ರವಿ ಆರ್. ಜೇರೆ, ಅದಾನಿ ಫೌಂಡೇಷನ್ನ ಅನುದೀಪ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.