ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲಕ್ಕೆ ತಕ್ಕಂತೆ ಅಪರಾಧಗಳ ಸ್ವರೂಪ ಬದಲಾವಣೆ: ಎಡಿಜಿಪಿ

Last Updated 27 ಮೇ 2022, 5:46 IST
ಅಕ್ಷರ ಗಾತ್ರ

ಉಡುಪಿ: ಕರಾವಳಿಯಲ್ಲ ಹಿಂದೆ ಭೂಗತ ಲೋಕದ ಚಟುವಟಿಕೆಗಳು ಹೆಚ್ಚಾಗಿದ್ದವು. ಕಾಲ ಬದಲಾದಂತೆ ಅಪರಾಧಗಳ ಸ್ವರೂಪವೂ ಬದಲಾಗುತ್ತಿರುತ್ತದೆ. ಎಂತಹ ಪರಿಸ್ಥಿತಿ ಇದ್ದರೂ ಎದುರಿಸಲು ಪೊಲೀಸ್ ಇಲಾಖೆ ಸಮರ್ಥವಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿ ಸಭೆ ನಡೆಸಿ ಮಾತನಾಡಿದ ಅವರು, ಹಿಜಾಬ್ ಕಾರಣದಿಂದ ಕರಾವಳಿ ಸೂಕ್ಷ್ಮವಾಗಿಲ್ಲ, ಹಿಂದಿನಿಂದಲೂ ಸೂಕ್ಷ್ಮ ಪ್ರದೇಶವಾಗಿದೆ. ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲ ಇಲಾಖೆ ಬದ್ಧವಾಗಿದೆ ಎಂದರು.

ಮಂಗಳೂರಿನಲ್ಲಿ ಹಿಜಾಬ್ ವಿಚಾರವಾಗಿ ಪ್ರತಿಭಟನೆ ನಡೆದಿದ್ದು, ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.

ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ವಿಶ್ಲೇಷಣೆ ಅಗತ್ಯವಿದ್ದು, ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ಹೆಚ್ಚು ಮಾಡುವುದು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿದ್ದು, ಕಾಲಾವಕಾಶ ಬೇಕು. ಸಂತೋಷ್ ಪಡೆದುಕೊಂಡ ಗುತ್ತಿಗೆಗಳ ವಿವರ ಹಾಗೂ ಲೆಕ್ಕ ಪರಿಶೋಧನೆ ವಿವರ ಕಲೆಹಾಕಲು ಸಮಯ ಹಿಡಿಯುತ್ತದೆ. ಎಫ್‌ಎಸ್‌ಎಲ್ ವರದಿ ಕೈಸೇರಿಲ್ಲ. ಎಲ್ಲ ಆಯಾಮಗಳಲ್ಲೂ ಪ್ರಕರಣದ ತನಿಖೆ ನಡೆಯುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT