ಗುರುವಾರ , ಫೆಬ್ರವರಿ 27, 2020
19 °C

ಮಂಗಳೂರಿನಲ್ಲಿ ಸ್ಫೋಟಕ: ಆದಿತ್ಯ ರಾವ್‌ನನ್ನು ಬ್ಯಾಂಕ್‌ಗೆ ಕರೆದೊಯ್ದು ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಉಡುಪಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ ಆರೋಪಿ ಆದಿತ್ಯರಾವ್‌ನನ್ನು ಶನಿವಾರ ಪೊಲೀಸರು ಇಲ್ಲಿನ ಕುಂಜಿಬೆಟ್ಟುವಿನಲ್ಲಿರುವ ಕರ್ಣಾಟಕ ಬ್ಯಾಂಕ್‌ಗೆ ಕರೆತಂದಿದ್ದಾರೆ.

ಆದಿತ್ಯ ರಾವ್‌ ಬ್ಯಾಂಕ್‌ನಲ್ಲಿ ಲಾಕರ್ ಹೊಂದಿದ್ದು, ಅದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ನಾಲ್ಕನೇ ಶನಿವಾರವಾದ್ದರಿಂದ ಬ್ಯಾಂಕ್‌‌ ರಜಾ ದಿನವಾದರೂ ಕೂಡ ಅಧಿಕಾರಿಗಳನ್ನು ಕರೆಸಿ ಬ್ಯಾಂಕ್ ತೆರೆಸಲಾಗಿದೆ. ಪೊಲೀಸ್ ಅಧಿಕಾರಿಗಳು ತಪಾಸಣೆ ಕೈಗೊಂಡಿದ್ದಾರೆ.

ಮಂಗಳೂರು ಉತ್ತರ ವಿಭಾಗದ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡ ತೀವ್ರ ಶೋಧ ನಡೆಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು