ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಅಗೋಳಿ ಮಂಜಣ್ಣ’ ಟೀಸರ್‌ ಬಿಡುಗಡೆ 26ರಂದು

24 udp agoli manjanna
Last Updated 24 ನವೆಂಬರ್ 2020, 16:59 IST
ಅಕ್ಷರ ಗಾತ್ರ

ಉಡುಪಿ: ತುಳುನಾಡ ವೀರಪುರುಷ ಅಗೋಳಿ ಮಂಜಣ್ಣನ ಕುರಿತು ತುಳು, ಕನ್ನಡ, ಮರಾಠಿ ಭಾಷೆಯಲ್ಲಿ ನಿರ್ಮಾಣ ಮಾಡಿರುವ ‘ಅಗೋಳಿ ಮಂಜಣ್ಣ’ ಸಿನಿಮಾದ ಟೀಸರ್ ನ.26ರಂದು ಸಂಜೆ 6ಕ್ಕೆ ಕಾರ್ಕಳದ ಕಟೀಲ್ ಇಂಟರ್‌ನ್ಯಾಷನಲ್‌ ಹೋಟೆಲ್‌ನಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.15ರಿಂದ ಚಿತ್ರೀಕರಣ ಆರಂಭವಾಗಲಿದ್ದು, ಏಪ್ರಿಲ್‌ನಲ್ಲಿ ಬಿಡುಗಡೆ ನಿರೀಕ್ಷೆ ಇದೆ. ಗುರುಕಿರಣ್ ಸಂಗೀತ ನೀಡಲಿದ್ದಾರೆ. ಸಕ್ಸಸ್‌ ಫಿಲಂಸ್ ಪ್ರೊಡಕ್ಷನ್‌ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗುತ್ತಿದ್ದು, ಕೋಟಿ ಚೆನ್ನಯ್ಯ ಧಾರಾವಾಹಿ ಖ್ಯಾತಿಯ ರೋಹಿತ್ ಕುಮಾರ್ ಕಟೀಲ್ ‘ಅಗೋಳಿ ಮಂಜಣ್ಣ’ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಟ ರೋಹಿತ್ ಕುಮಾರ್ ಕಟೀಲ್, ಚಿತ್ರತಂಡದ ಡಾ.ಜಯಪ್ರಕಾಶ್ ಮಾವಿನಕುಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT