ಸೋಮವಾರ, ಆಗಸ್ಟ್ 2, 2021
23 °C

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಗುಂಬೆ ಘಾಟಿ-ಸಾಂದರ್ಭಿಕ ಚಿತ್ರ

ಉಡುಪಿ: ಮಳೆಗಾಲದಲ್ಲಿ ಭಾರಿ ವಾಹನಗಳ ಸಂಚಾರದಿಂದ ಆಗುಂಬೆ ಘಾಟಿ ರಸ್ತೆಯ ಮಣ್ಣು ಕುಸಿಯುವ ಅಪಾಯ ಇರುವುದರಿಂದ ಅ.15ರವರೆಗೆ ಆಗುಂಬೆ ಘಾಟಿಯಲ್ಲಿ ಅಧಿಕ ಬಾರದ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಭಾರಿ ವಾಹನಗಳು ಆಗುಂಬೆ ಘಾಟಿಯ ಬದಲಾಗಿ ಉಡುಪಿಯಿಂದ ಸಿದ್ದಾಪುರ, ಹೊಸಂಗಡಿ, ಬಾಳೆಬರೇ ಘಾಟ್, ಹುಲಿಕಲ್, ಮಾಸ್ತಿಕಟ್ಟೆ ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹೋಗಬಹುದು. ಮಂಗಳೂರು ಕಡೆಯಿಂದ ಕಾರ್ಕಳ, ಹೆಬ್ರಿ, ಸಿದ್ಧಾಪುರ,ಹೊಸಂಗಡಿ, ಬಾಳೆಬರೇ ಘಾಟ್, ಹುಲಿಕಲ್, ಮಾಸ್ತಿಕಟ್ಟೆ, ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗವನ್ನು ತಲುಪಬಹುದು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು