ಹೆಬ್ರಿ: ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಹಿಂಸೆ ಅನುಭವಿಸುತ್ತಿರುವ ಬಿಲ್ಲವ ಸಮುದಾಯದ ಯುವತಿ ಅಕ್ಷತಾ ಪೂಜಾರಿ ಮತ್ತು ಅವರ ತಾಯಿಯನ್ನು ಬುಧವಾರ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ, ರಾಜ್ಯ ಸರ್ಕಾರದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಭೇಟಿಯಾಗಿ ಸಾಂತ್ವನ ಹೇಳಿ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಅಧಿಕಾರ ದುರುಪಯೋಗ ಎಸಗಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಮಹೇಶ ಪೂಜಾರಿ, ಪೆರ್ಡೂರು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಪ್ರಕಾಶ ಪೂಜಾರಿ ಗೋರೆಲ್, ಅಲೆವೂರು ಗ್ರಾಮ ಪಂಚಾಯತಿ ಅಧ್ಯಕ್ಷ ಯತೀಶ ಪೂಜಾರಿ ಅಲೆವೂರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಸಮಾಜ ಸೇವಕಿ ಪೂರ್ಣಿಮಾ ನಾಯಕ್ ಕುಯಿಲಾಡಿ, ಕಿಶೋರ್ ಅಂಚನ್ ಪೆರ್ಡೂರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.