ಉಡುಪಿ: ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ವಿಭಾಗದ ವತಿಯಿಂದ ಟೀಂ ಈಶ್ವರ ಮಲ್ಪೆ ತಂಡದ ಸಹಯೋಗದಲ್ಲಿ ಹಾಗೂ ಸಮಾಜ ಕಾರ್ಯ ವಿಭಾದ ಹಳೆ ವಿದ್ಯಾರ್ಥಿ ಸಂಘದ ಸಹಕಾರದಲ್ಲಿ ಇದೇ 25ರಂದು ಆಳ್ವಾಸ್ ರೀಚ್ -2026 ರಾಷ್ಟ್ರೀಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಸಂಯೋಜಕ ಕೃಷ್ಣಮೂರ್ತಿ ಬಿ. ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಸಮಾವೇಶದ ಉದ್ಘಾಟನೆಯು ಅಂದು ಬೆಳಿಗ್ಗೆ 10.30ಕ್ಕೆ ಮಲ್ಪೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ನಂತರ ವಿವಿಧ ಸ್ಪರ್ಧೆಗಳು, ವಿಚಾರಗೋಷ್ಠಿಗಳು ಜರುಗಲಿವೆ ಎಂದು ಹೇಳಿದರು.

ಸಂಜೆ 4 ಗಂಟೆಗೆ ಹಳೆ ವಿದ್ಯಾರ್ಥಿಗಳ ಸಂಗಮದೊಂದಿಗೆ ಮಾದಕ ವ್ಯಸನದ ಬಗ್ಗೆ ಜಾಗೃತಿ ಜಾಥಾ ಏರ್ಪಡಿಸಲಾಗಿದೆ ಎಂದರು.

ನಂತರ ಗಾಯಕಿ ಕಲಾವತಿ ದಯಾನಂದ್ ನೇತೃತ್ವದಲ್ಲಿ ಉಡುಪಿಯ ಕಲಾಸಿಂಧು ಸಂಗೀತ ಬಳಗದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30 ರಿಂದ ನೂತನ ಆಂಬುಲೆನ್ಸ್ ಸೇವೆಯ ಲೋಕಾರ್ಪಣೆ, ಸಮಾಜ ಸೇವಕ ಈಶ್ವರ ಮಲ್ಪೆ ಅವರಿಗೆ ಸನ್ಮಾನ ನಡೆಯಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಸಮಾಜ ಸೇವಕ ಈಶ್ವರ್ ಮಲ್ಪೆ, ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಮಧುಮಾಲಾ ಕೆ. ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-28-148296061

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.