ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೃಷಿ ಉತ್ಪನ್ನಗಳಿಗೆ ಸಮರ್ಪಕ ಬೆಲೆ ಅಗತ್ಯ’

ಕೋಟ ಪಶುಪಾಲನಾ ಚಟುವಟಿಕೆ ತರಬೇತಿ
Last Updated 13 ಜೂನ್ 2022, 7:57 IST
ಅಕ್ಷರ ಗಾತ್ರ

ಕೋಟ(ಬ್ರಹ್ಮಾವರ): ಹೈನುಗಾರರು ಮತ್ತು ರೈತರ ಉತ್ಪನ್ನಗಳಿಗೆ ಕಾಲಕ್ಕೆ ತಕ್ಕಂತೆ ಸಮರ್ಪಕ ದರ ಸಿಗಬೇಕು. ಇವರಿಗೆ ನ್ಯಾಯ ಒದಗಿಸುವ ಕೆಲಸ ಜನಪ್ರತಿನಿಧಿಗಳು, ಅಧಿಕಾರಿಗಳು ಮಾಡಬೇಕು ಎಂದು ಕೋಟ ಸಹಕಾರಿ ವ್ಯವಸಾಯ ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯಿತಿ ಪಶುಪಾಲನಾ ಮತ್ತು ಪಶುವೈದಕೀಯ ಸೇವಾ ಇಲಾಖೆ ಹಾಗೂ ಕೋಟ ಸಹಕಾರಿ ವ್ಯವಸಾಯಿಕ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಧುನಿಕ ಪಶುಪಾಲನಾ ಚಟುವಟಿಕೆಗಳ ಬಗ್ಗೆ ರೈತರಿಗೆ ಶನಿವಾರ ನಡೆದ ತಾಂತ್ರಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೋಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜಿತ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.

ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಶಿವ ಕುಮಾರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ರಾಜ್, ಕೋಟ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷ ರಾಜೀವ ದೇವಾಡಿಗ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ, ನಿರ್ದೇಶಕ ಟಿ.ಮಂಜುನಾಥ ಗಿಳಿಯಾರು ಇದ್ದರು.

ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಕೆ.ಶಂಕರ ಶೆಟ್ಟಿ ಮಾತನಾಡಿದರು. ಬ್ರಹ್ಮಾವರ ತಾಲ್ಲೂಕು ಪಶುಪಾಲನಾ ಇಲಾಖೆಯ ಆಡಳಿತ ನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಪಶುವೈದ್ಯಾಧಿಕಾರಿ ಡಾ.ಉದಯ ಕುಮಾರ್ ಶೆಟ್ಟಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT