ಉಡುಪಿ: ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು ₹10 ಕೆ.ಜಿ ಆಹಾರಧಾನ್ಯ ಉಚಿತವಾಗಿ ವಿತರಿಸಲು ಸರ್ಕಾರ ನಿರ್ಧರಿಸಿದ್ದು, 5 ಕೆ.ಜಿ ಹೆಚ್ಚುವರಿ ಅಕ್ಕಿ ಸರಬರಾಜು ಮಾಡುವವರೆಗೂ ಪ್ರತಿ ಕೆ.ಜಿಗೆ ₹34ರಂತೆ ಪಡಿತರ ಚೀಟಿ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರವಾಗಿ ನಗದು ಜಮೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ತಿಳಿಸಿದ್ದಾರೆ.

ಪಡಿತರ ಚೀಟಿದಾರರು ಏನು ಮಾಡಬೇಕು

ಪಡಿತರ ಚೀಟಿಯಲ್ಲಿ ಕಡ್ಡಾಯವಾಗಿ ಕುಟುಂಬದ ಮುಖ್ಯಸ್ಥರ ಹೆಸರು ನಮೂದಾಗಿರಬೇಕು. ಮುಖ್ಯಸ್ಥರು ನಿಧನರಾಗಿದ್ದರೆ ಆಹಾರ ಶಾಖೆಗೆ ಭೇಟಿ ನೀಡಿ ಮೃತರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಸಿ ಇ-ಕೆವೈಸಿ ಮೂಲಕ ಕುಟುಂಬದ ಮುಖ್ಯಸ್ಥರ ಹೆಸರು ಆಯ್ಕೆ ಮಾಡಬೇಕು. ಪಡಿತರ ಚೀಟಿಯಲ್ಲಿ ಒಂದಕ್ಕಿಂತ ಹೆಚ್ಚು ಕುಟುಂಬದ ಮುಖ್ಯಸ್ಥರ ಹೆಸರಿದ್ದರೆ ನಗದು ವರ್ಗಾವಣೆ ಮಾಡಲು ಸಾಧ್ಯವಿಲ್ಲ.

ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಲ್ಲದ, ಬ್ಯಾಂಕ್ ಖಾತೆ ಹೊಂದಿರದ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಿರದ ಪಡಿತರ ಚೀಟಿದಾರರ ಮಾಹಿತಿಯನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ತಿಳಿಸಲಾಗಿದ್ದು, ಖಾತೆ ಇಲ್ಲದಿದ್ದರೆ ಕೂಡಲೇ ಖಾತೆ ತೆರೆಯಬೇಕು, ಖಾತೆ ನಿಷ್ಕ್ರಿಯವಾಗಿದ್ದರೆ ಚಾಲ್ತಿಗೊಳಿಸಬೇಕು, ಇಲ್ಲವಾದರೆ ಜುಲೈ ತಿಂಗಳ ನಗದು ವರ್ಗಾವಣೆ ಆಗುವುದಿಲ್ಲ.

ಫಲಾನುಭವಿಗಳು 2023ರ ಜುಲೈ 20ರ ಒಳಗೆ ಬ್ಯಾಂಕ್ ಖಾತೆ ಚಾಲ್ತಿಗೊಳಿಸಿದಲ್ಲಿ ಆಗಸ್ಟ್ ತಿಂಗಳಲ್ಲಿ ನಗದು ವರ್ಗಾವಣೆ ಮೂಲಕ ಯೋಜನೆಯ ಪ್ರಯೋಜನ ಪಡೆಯಬಹುದು. ಪಡಿತರ ಚೀಟಿದಾರರು ನೇರ ನಗದು ವರ್ಗಾವಣೆ ಪ್ರಯೋಜನ ಪಡೆಯಲು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಪಡಿತರ ಚೀಟಿದಾರರಿಗೆ ಅನುಕೂಲ ಮಾಡಿಕೊಡಲು ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ವತಿಯಿಂದ ಬ್ಯಾಂಕ್ ಖಾತೆಗಳನ್ನು ತೆರೆಯಲು ಕ್ರಮವಹಿಸಲಾಗಿದೆ. ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್ ಸಿಬ್ಬಂದಿ ಶಿಬಿರ ನಡೆಸಿ ಬ್ಯಾಂಕ್ ಖಾತೆ ತೆರೆಯಲು ನೆರವು ನೀಡಲಿದ್ದಾರೆ. ಪಡಿತರ ಚೀಟಿ ಹೊಂದಿರುವ ಕುಟುಂಬದ ಮುಖ್ಯಸ್ಥರು ಶಿಬಿರಕ್ಕೆ ಮೊಬೈಲ್, ಆಧಾರ್ ಕಾರ್ಡ್ ಪ್ರತಿ ತರಬೇಕು.

ಎಲ್ಲೆಲ್ಲಿ ಶಿಬಿರ

ಜುಲೈ 14ರಂದು ಉಡುಪಿ ತಾಲ್ಲೂಕಿನ ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ, 18ರಂದು ಉದ್ಯಾವರ ಗ್ರಾಮ ಪಂಚಾಯಿತಿ ಕಚೇರಿ, 19ರಂದು ಉಡುಪಿ ತಾಲ್ಲೂಕು ಕಚೇರಿಯ ಆಹಾರ ಶಾಖೆ, 20ರಂದು ಕಲ್ಯಾಣಪುರ ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಮಲ್ಪೆ ಅಂಚೆ ಕಚೇರಿಯಲ್ಲಿ ಶಿಬಿರ ನಡೆಯಲಿದೆ.

15ರಂದು ಕಾಪು ಅಂಚೆ ಕಚೇರಿ, 17ರಂದು ಕಟಪಾಡಿ ಗ್ರಾಮ ಪಂಚಾಯಿತಿ ಕಚೇರಿ, 20ರಂದು ಶಿರ್ವ ಅಂಚೆ ಕಚೇರಿ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯಿತಿ ಕಚೇರಿ.

14ರಂದು ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಅಂಚೆ ಕಚೇರಿಯಲ್ಲಿ, 17ರಂದು ಬ್ರಹ್ಮಾವರ ಅಂಚೆ ಕಚೇರಿಯಲ್ಲಿ, 18ರಂದು ಕೋಟ ಅಂಚೆ ಕಚೇರಿ.

15 ಕುಂದಾಪುರ ತಾಲ್ಲೂಕಿನ ಸಿದ್ಧಾಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ, 19ರಂದು ಹಾಲಾಡಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಹಾಗೂ 20ರಂದು ವಂಡ್ಸೆ ಅಂಚೆ ಕಚೇರಿ.

15ರಂದು ಬೈಂದೂರು ತಾಲ್ಲೂಕಿನ ಹಳ್ಳಿಹೊಳೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ, 17ರಂದು ಬೈಂದೂರು ತಾಲ್ಲೂಕು ಕಚೇರಿ ಆಹಾರ ಶಾಖೆ, 20ರಂದು ಕೊಲ್ಲೂರು ಗ್ರಾಮ ಪಂಚಾಯಿತಿ ಕಚೇರಿ, ಮರವಂತೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶಿಬಿರ ನಡೆಯಲಿದೆ.

17ರಂದು ಕಾರ್ಕಳ ತಾಲ್ಲೂಕಿನ ತಾಲ್ಲೂಕು ಕಚೇರಿ, ನಲ್ಲೂರು ಗ್ರಾಮ ಪಂಚಾಯಿತಿ ಹಾಗೂ ಬೆಳ್ಮಣ್ ಗ್ರಾಮ ಪಂಚಾಯಿತಿ, 18ರಂದು ಅಜೆಕಾರು ನಾಡಕಚೇರಿ, ಮಾಳ ಹಾಗೂ ಈದು ಗ್ರಾಮ ಪಂಚಾಯಿತಿ ಕಚೇರಿ, 15ರಂದು ಹೆಬ್ರಿ ತಾಲ್ಲೂಕು ಕಚೇರಿ, ಬೆಳ್ವೆ ಅಂಚೆ ಕಚೇರಿ ಹಾಗೂ ಮುದ್ರಾಡಿ ಅಂಚೆ ಕಚೇರಿಗಳಲ್ಲಿ ಶಿಬಿರ ನಡೆಯಲಿದೆ.

ಸಾರ್ವಜನಿಕರು ಪಡಿತರ ಹಣ ವರ್ಗಾವಣೆ ಬಗ್ಗೆ ವೆಬ್‌ಸೈಟ್ https://ahara.kar.nic.in /status2/ ಮೂಲಕ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಆಹಾರ ಶಾಖೆ ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.