ಹಿರಿಯಡ್ಕ: ಶಿಕ್ಷಣದ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈಯಲು ಪ್ರೋತ್ಸಾಹ ನೀಡುತ್ತಾ, ಜಿಲ್ಲೆಯಲ್ಲಿ ಮನೆಮಾತಾಗಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಮಾನವ ಸಂಪನ್ಮೂಲ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡುತ್ತಿವೆ. ಇಂತಹ ಸಂಸ್ಕಾರಯುತ ಶಿಕ್ಷಣ ಪಡೆದ ವಿದ್ಯಾರ್ಥಿ ಸಮೂಹ ದೇಶದ ಬಲವರ್ಧನೆಗೆ ದುಡಿಯಬೇಕು ಎಂದು ಎನ್.ಎಸ್.ಎಸ್. ಮಾಜಿ ರಾಜ್ಯ ಸಂಯೋಜನಾಧಿಕಾರಿ, ನಿವೃತ್ತ ಪ್ರಾಂಶುಪಾಲ ಗಣನಾಥ ಎಕ್ಕಾರು ಹೇಳಿದರು.

ಅವರು ಉಡುಪಿ ಮತ್ತು ಮಣಿಪಾಲದ ಜ್ಞಾನಸುಧಾ ಕಾಲೇಜುಗಳ ಜಂಟಿ ವಾರ್ಷಿಕೋತ್ಸವ ‘ಜ್ಞಾನಸಂಭ್ರಮ’ದಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಸ್ತೂರ್ಬಾ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, ದೇಶವನ್ನು ಬಲಗೊಳಿಸಲು ಉತ್ತಮ ಶಿಕ್ಷಣ, ಉತ್ತಮ ಆರೋಗ್ಯ ಮುಖ್ಯ. ನಾವು ಜವಾಬ್ದಾರಿಯುತ ನಾಗರಿಕರಾಗಿ ಹುಟ್ಟಿದ ನಾಡಿಗೆ ಕೊಡುಗೆ ನೀಡಬೇಕು. ಡಾ.ಸುಧಾಕರ ಶೆಟ್ಟಿ ಅವರು ಉತ್ತಮ ಶಿಕ್ಷಣ ತಜ್ಞರಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಾ ಬಂದಿರುವುದು ಶ್ಲಾಘನೀಯ ಎಂದರು.

ಅಜೆಕಾರು ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರಮಟ್ಟದ ಚೆಸ್ ಟೂರ್ನಿಯಲ್ಲಿ ಭಾಗವಹಿಸಿದ ಉಡುಪಿ ಜ್ಞಾನಸುಧಾ ವಿದ್ಯಾರ್ಥಿ ನಿಖಿಲ್ ವಿಕ್ರಮ್ ಅವರನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದ ಕ್ರೀಡಾ ಪಟುಗಳನ್ನು, ವಿವಿಧ ಸ್ಪರ್ಧೆಗಳ ವಿಜೇತರನ್ನು ಸನ್ಮಾನಿಸಲಾಯಿತು.

ಮಣಿಪಾಲ್ ಟ್ರಸ್ಟ್ನ ಸಂಚಾಲಕ ಪ್ರಕಾಶ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಉಪ ಪ್ರಾಂಶುಪಾಲ ಪ್ರಕಾಶ್ ಜೋಗಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು, ಅಜೆಕಾರು ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ ಟ್ರಸ್ಟಿ ವಿದ್ಯಾವತಿ ಎಸ್. ಶೆಟ್ಟಿ, ಕಾರ್ಕಳ ಜ್ಞಾನಸುಧಾ ಪ್ರೌಢಶಾಲೆ ಉಪ ಪ್ರಾಂಶುಪಾಲೆ ವಾಣಿ ಕೆ. ಇದ್ದರು. ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಸಂತೋಷ್ ಸ್ವಾಗತಿಸಿದರು. ಮಣಿಪಾಲ ಜ್ಞಾನಸುಧಾ ಪ್ರಾಂಶುಪಾಲ ಗಣೇಶ್ ಶೆಟ್ಟಿ ವಂದಿಸಿದರು. ಇಂಗ್ಲಿಷ್ ಉಪನ್ಯಾಸಕಿ ಶಮಿತಾ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.