ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೂಡುಬೆಳ್ಳೆ: ವಿಶ್ವ ತಂಬಾಕು ವಿರೋಧಿ ದಿನಾಚರಣೆ

Published 9 ಜೂನ್ 2023, 14:05 IST
Last Updated 9 ಜೂನ್ 2023, 14:05 IST
ಅಕ್ಷರ ಗಾತ್ರ

ಶಿರ್ವ: ಕಾಪು ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,  ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿರ್ವ ವಲಯದ ಜಂಟಿ ಆಶ್ರಯದಲ್ಲಿ ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ನಡೆಯಿತು.

ಧರ್ಮಸ್ಥಳ ಯೊಜನೆಯ ಯೋಜನಾಧಿಕಾರಿ ಗಣೇಶ್ ಮಾತನಾಡಿ, ‘ಯುವಜನರು ಕೆಡುಕಿನೆಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಗುಟ್ಕಾ, ಸಿಗರೇಟು, ಬೀಡಿ, ತಂಬಾಕು ಇತರ ಮಾದಕ ವಸ್ತುಗಳ ಸೇವನೆಯಿಂದ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಆರೋಗ್ಯವೇ ಅರಮನೆಯಾಗಿದ್ದು, ಅನಾರೋಗ್ಯ ಶರೀರವೇ ಸೆರಮನೆಯಾಗಿದೆ’ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲ್ಲೂಕು ಯೋಜನಾಧಿಕಾರಿ ಜಯಂತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಸ್ಥಾಪಕ ಅಧ್ಯಕ್ಷರಾದ ಗೋಪಿಕೃಷ್ಣ ರಾವ್ ಮಾತನಾಡಿದರು. ಪ್ರಾಂಶುಪಾಲರಾದ ಯು.ಎಲ್.ಭಟ್ ಹಾಗೂ ವಲಯ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ಇದ್ದರು.

ಶಿರ್ವ ವಲಯ ಮೇಲ್ವಿಚಾರಕಿ ಗೀತಾ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಡಾ. ಲೀನಾ ನಾಯ್ಕ್ ನಿರೂಪಿಸಿದರು. ಸುನಂದಾ ಕೋಟ್ಯಾನ್  ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT