ಕುಂದಾಪುರ: ಅಗಲಿದ ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ ಅವರು ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದರು. ಬಸ್ರೂರು ಎಂಬ ಊರಿನ ಹೆಗ್ಗುರುತು ಎನ್ನುವಂತೆ ಶೈಕ್ಷಣಿಕ, ಧಾರ್ಮಿಕ, ಸಹಕಾರಿ ಹಾಗೂ ಸಾಮಾಜಿಕ ಕ್ಷೇತ್ರದ ಮುಂದಾಳಾಗಿ ಅವರು ಗುರುತಿಸಿಕೊಂಡಿದ್ದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿ ಅರೆಶಿರೂರು, ಹೊಸೂರು, ಕೊಡ್ಲಾಡಿಯಂತಹ ಕುಗ್ರಾಮಗಳಲ್ಲಿ ಪ್ರೌಢಶಾಲೆಗಳನ್ನು ಆರಂಭಿಸಲು ಅಡಿಗಲ್ಲು ಹಾಕಿದ್ದರು. ದೇವಸ್ಥಾನಗಳ ಜೀರ್ಣೋದ್ದಾರ, ನಾಗಮಂಡಲ, ಬ್ರಹ್ಮಕಲಶೋತ್ಸವ, ಪುನರ್ ಪ್ರತಿಷ್ಠೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ನಿಂತು ಮಾರ್ಗದರ್ಶನ ಮಾಡುತ್ತಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳದೊಂದಿಗೆ ನಿಕಟ ಸಂಬಂಧ ಹೊಂದಿದ್ದ ಅಪ್ಪಣ್ಣ ಹೆಗ್ಡೆಯವರು, ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾಗಿ, ಕುಂದಾಪುರ ತಾಲ್ಲೂಕು ಜನಜಾಗೃತಿ ವೇದಿಕೆ ಸಂಸ್ಥಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಮಂಗಳೂರಿನ ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ, ತಾಲ್ಲೂಕು ಟಿಎಪಿಸಿಎಂಎಸ್ ಅಧ್ಯಕ್ಷರಾಗಿ, ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ತಾಲ್ಲೂಕು ಭೂ ಬ್ಯಾಂಕ್ ಉಪಾಧ್ಯಕ್ಷರಾಗಿಯೂ ದುಡಿದಿದ್ದರು.

ಬಸ್ರೂರಿನ ಹಿಂದೂ ಅನುದಾನಿತ ಹಿ.ಪ್ರಾ. ಶಾಲೆ, ನಿವೇದಿತಾ ಪ್ರೌಢಶಾಲೆ, ಶ್ರೀ ಶಾರದಾ ಪ.ಪೂ. ಕಾಲೇಜು ಹಾಗೂ ಶಾರದಾ ಪದವಿ ಕಾಲೇಜುಗಳ ಸಂಚಾಲಕರಾಗಿದ್ದರು. ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾಗಿ, ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಗಳ ಸಂಸ್ಥಾಪಕರಾಗಿದ್ದರು. ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ಮೂಲಕ ಅನೇಕ ಸಮಾಜಮುಖಿ ಕಾರ್ಯಗಳನ್ನೂ ಕೈಗೊಂಡಿದ್ದರು.

ಗಣ್ಯರ ನಮನ: ಬಸ್ರೂರಿನ ಶಾರದಾ ಕಾಲೇಜಿನ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ನಟ ರಿಷಬ್ ಶೆಟ್ಟಿ, ಕೋಟ ಸಂಸದ ಶ್ರೀನಿವಾಸ ಪೂಜಾರಿ, ಮೂಡುಬಿದಿರೆ ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ.ಮೋಹನ್ ಆಳ್ವ, ಶಾಸಕರಾದ ಎ.ಕಿರಣಕುಮಾರ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಸುರೇಶ್ ಶೆಟ್ಟಿ ಗುರ್ಮೆ, ಶಾಸಕ ಯಶ್ಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪ್ಚಂದ್ರ ಶೆಟ್ಟಿ, ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ರಘಪತಿ ಭಟ್, ಬಿ.ಎಂ.ಸುಕುಮಾರ ಶೆಟ್ಟಿ, ಉದ್ಯಮಿ ಜಿ.ಶಂಕರ್, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ ಸೇರಿದಂತೆ ಸಾವಿರಾರು ಮಂದಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಅನಂತರ ಕಾಲೇಜಿನಿಂದ ಸ್ವಗೃಹಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ದು, ಅಂತಿಮ ವಿಧಿಗಳನ್ನು ಪೂರೈಸಿದ ಬಳಿಕ ಪಷ್ಪಾಲಂಕೃತ ವಾಹನದಲ್ಲಿ ಬಸ್ರೂರು ಪೇಟೆಯಲ್ಲಿ ಶವಯಾತ್ರೆ ನಡೆಸಿ ಅಂತ್ಯಕ್ರಿಯೆ ನಡೆಸಲಾಯಿತು.

ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಸಲಹೆ ಮೇರೆಗೆ ಸರ್ಕಾರದಿಂದ ಅಂತಿಮ ಗೌರವ ಸಲ್ಲಿಸಲಾಯಿತು. ಕುಂದಾಪುರ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ, ಸಶಸ್ತ್ರ ಮೀಸಲು ಪಡೆಯ ನಿರೀಕ್ಷಕ ರವಿಕುಮಾರ್, ಎಸ್ಐ ರವಿ ಅವರ ನೇತೃತ್ವದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ಅಂತಿಮ ಗೌರವ ಸಲ್ಲಿಸಿದರು.

ಬಸ್ರೂರು ಬಂದ್ ಮೃತರ ಗೌರವಾರ್ಥ ಬಸ್ರೂರು ಗ್ರಾಮದ ಶಾಲಾ– ಕಾಲೇಜುಗಳಿಗೆ ರಜೆ ಸಾರಲಾಗಿತ್ತು. ಅಂಗಡಿ-ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಣೆಯಿಂದ ಮುಚ್ಚಿ ವರ್ತಕರು ಸಂತಾಪ ಸೂಚಿಸಿದ್ದರು. ಮೃತರ ಗೌರವಾರ್ಥ ಬೆಂದೂರು ಪೇಟೆಯಲ್ಲೂ ಕೆಲ ಗಂಟೆಗಳ ಕಾಲ ಹರತಾಳ ಆಚರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.