ಕುಂದಾಪುರ: ಸಂಸದ ಬಿ.ವೈ. ರಾಘವೇಂದ್ರ ಅವರು ದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಬುಧವಾರ ಭೇಟಿ ಮಾಡಿ, ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಮನವಿ ಮಾಡಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉದ್ಯಮಿ ವೆಂಕಟೇಶ್ ಕಿಣಿ ಅವರೊಂದಿಗೆ ಸಚಿವರನ್ನು ಭೇಟಿ ಮಾಡಿದ್ದ ಸಂಸದರು, ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ. ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಆದ್ದರಿಂದ ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣಕ್ಕೆ ಸಮೀಪವಿರುವ ಒತ್ತಿನೆಣೆಯಲ್ಲಿ 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು, ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.