ಉಡುಪಿ: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ವಿರುದ್ಧ ಒಂದೆರಡು ದಿನಗಳಲ್ಲಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.
ಕಾಪುವಿನಲ್ಲಿ ಮಂಗಳವಾರ ಮಾತನಾಡಿದ ಅವರು, ‘ಸ್ಥಳೀಯ ಸಂಸ್ಥೆಗಳ ಮೀಸಲಾತಿ ನಿಗದಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ನಾಲ್ಕು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳನ್ನು ವಿಚಾರಣೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವಂತೆ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು.
ಅದರಂತೆ, ನವೆಂಬರ್‌ನಲ್ಲಿಯೇ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀಡಿದ ಸೂಚನೆಯಂತೆ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಸಲಾಗಿತ್ತು. ಈಗ ತಡೆಯಾಜ್ಞೆ ನೀಡಿದೆ. ಸುಪ್ರೀಂಕೋರ್ಟ್‌ನಿಂದ ವಾಪಸ್ ಬಂದಿರುವ ನಾಲ್ಕು ಪ್ರಕರಣಗಳ ಕುರಿತು ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಶೀಘ್ರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.