ಬೈಂದೂರು: ‘ವೈಯಕ್ತಿಕ ವಿಚಾರಗಳನ್ನು ಮೀರಿದ ಸಂಬಂಧ ಏರ್ಪಡಿಸಿ ನಮ್ಮನ್ನು ಒಂದುಗೂಡಿಸುವ ಶಕ್ತಿ ಕಲೆ ಮತ್ತು ಸಾಹಿತ್ಯಕ್ಕಿದೆ. ಜಾತಿ, ಮತ, ಅಂತಸ್ತುಗಳ ನರಕದಿಂದ ಮೇಲೆತ್ತುವ ಸಾಮರ್ಥ್ಯ ಕಲೆಗಿದೆ’ ಎಂದು ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಹೇಳಿದರು.

ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಟರಾಜ ಡಾನ್ಸ್ ಕಂಪನಿಯ 3ನೇ ವರ್ಷದ ಸಮ್ಮರ್ ಕ್ಯಾಂಪ್ನ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತಾಯಿಯಂಥ ಕರುಣೆ, ಮಗುವಿನಂಥ ನಿಷ್ಕಪಟ ದೃಷ್ಟಿಯಿಂದ ನೋಡಿದರೆ ಜಗತ್ತು ಸುಂದರ, ಸನಿಹವಾಗುತ್ತದೆ ಎಂದರು.

ರೋಟರಿ ಕ್ಲಬ್ ಅಧ್ಯಕ್ಷ ಮೋಹನ ರೇವಣ್ಕರ್ ಅಧ್ಯಕ್ಷತೆ ವಹಿಸಿದ್ದರು. ಲಾವಣ್ಯ ಅಧ್ಯಕ್ಷ ನರಸಿಂಹ ಬಿ. ನಾಯಕ್, ಜೆಸಿಐ ಬೈಂದೂರು ಸಿಟಿ ಅಧ್ಯಕ್ಷ ರಾಜು ಮೊಗವೀರ, ಜೆಸಿಐ ಡಾನ್ಸ್ ಕಂಪನಿ ಕೊರಿಯೊಗ್ರಾಫರ್ ನಟರಾಜ್ ಭಾಗವಹಿಸಿದ್ದರು. ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳು, ಪೋಷಕರಿಗೆ ಬಹುಮಾನ ನೀಡಲಾಯಿತು. ಕಿರಣ್ ಬಿಜೂರು ನಿರ್ವಹಿಸಿದರು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ವೈಭವ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.