ಬ್ರಹ್ಮಾವರ: ರಾಜ್ಯ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಯಶಸ್ವಿಯಾಗಿ ಜನರಿಗೆ ತಲುಪಿಸಲು ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನಿಸಿದರೆ ಯೋಜನೆಗಳು ಯಶಸ್ವಿಯಾಗಲು ಸಾಧ್ಯ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ಆರೂರು ಗ್ರಾಮ ಪಂಚಾಯಿತಿಯ ನೂತನ ಸಭಾಭವನ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿ, ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಸರ್ಕಾರದ ಅನುದಾನದ ಜೊತೆ ಸ್ಥಳೀಯ ದಾನಿಗಳ ಸಹಕಾರ ಶ್ಲಾಘನೀಯ ಎಂದರು.

ಪಂಚಾಯಿತಿ ಅಧ್ಯಕ್ಷ ಗುರುರಾಜ ರಾವ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ವನಿತಾ ಪೂಜಾರಿ, ಸದಸ್ಯರಾದ ರತ್ನಾಕರ ಶೆಟ್ಟಿ, ಉದಯ ನಾಯ್ಕ, ಗಣೇಶ ಪೂಜಾರಿ, ಮಮತಾ ಶೆಟ್ಟಿ, ಚಂದ್ರಾವತಿ ಹೆಬ್ಬಾರ್, ಮಾಲತಿ ನಾಯ್ಕ, ಪಾರ್ವತಿ, ಕಾರ್ಯದರ್ಶಿ ಆನಂದ ನಾಯ್ಕ, ಗ್ರಾಮ ಆಡಳಿತಾಧಿಕಾರಿ ಭವ್ಯಾ ಭಾಗವಹಿಸಿದ್ದರು.

₹87 ಲಕ್ಷಕ್ಕೂ ಅಧಿಕ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು. ಸಭಾಭವನ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಪಂಚಾಯಿತಿ ವತಿಯಿಂದ ಗೌರವಿಸಲಾಯಿತು. ಸದಸ್ಯ ರಾಜೀವ ಕುಲಾಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಪ್ರಶಾಂತ ಶೆಟ್ಟಿ ನಿರೂಪಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಮಿತಾ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.