ಬುಧವಾರ, ಮಾರ್ಚ್ 29, 2023
31 °C

ಛಾಯಾಗ್ರಹಕ ಅಶೋಕ್ ಕುಮಾರ್ ಶೆಟ್ಟಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ತುಮಕೂರು ಜಿಲ್ಲೆಯ ಶಿರಾದಲ್ಲಿ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕುಂದಾಪುರ ತಾಲ್ಲೂಕಿನ ಹಿರಿಯ ಛಾಯಾಗ್ರಹಕ ಹೇರೂರು ಅಶೋಕ್ ಕುಮಾರ್ ಶೆಟ್ಟಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ಸೋಮವಾರ ಮದುವೆ ಕಾರ್ಯಕ್ರಮ ಮುಗಿಸಿ ಪುತ್ರನೊಂದಿಗೆ ಕಾರಿನಲ್ಲಿ ವಾಪಸ್‌ ಬರುವಾಗ ಕಾರು ಕಂಟೈನರ್ ಲಾರಿಗೆ ಡಿಕ್ಕಿಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅಶೋಕ್ ಕುಮಾರ್ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೀವನ್ಮರಣ ಸ್ಥಿತಿಯಲ್ಲಿದ್ದ ಅಶೋಕ್‌ ಕೊನೆಯುಸಿರೆಳೆದಿದ್ದಾರೆ.

ಎಸ್‌ಕೆಪಿಎ ಮಾಜಿ ಅಧ್ಯಕ್ಷ, ಕೆಪಿಎ ಮಾಜಿ ಉಪಾಧ್ಯಕ್ಷ ಹಾಗೂ ಪ್ರಸ್ತುತ ಎಸ್‌ಕೆಪಿಎ ಸಲಹಾ ಸಮಿತಿಯ ಸಂಚಾಲಕರಾಗಿ ಅಶೋಕ್ ಕಾರ್ಯ ನಿರ್ವಹಿಸುತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು