ಶುಕ್ರವಾರ, ಜೂನ್ 25, 2021
29 °C
ಕಂದಾಯ ಸಚಿವ ಆರ್‌.ಅಶೋಕ್‌

ಹೆಚ್ಚಿದ ಸೋಂಕು: ಹಳ್ಳಿಗಳತ್ತ ವೈದ್ಯರ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ನಗರಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಹಳ್ಳಿಗಳಿಗೆ ಮರಳಿರುವ ಕಾರಣ ಗ್ರಾಮೀಣ ಭಾಗಗಳಲ್ಲಿ ಕೋವಿಡ್‌ ಹೆಚ್ಚಾಗಿದೆ. ಸೋಂಕು ನಿಯಂತ್ರಣಕ್ಕೆ ತರಲು ಪ್ರತಿ ತಾಲ್ಲೂಕಿನಿಂದ 15 ವೈದ್ಯರು ಹಾಗೂ 40 ನರ್ಸಿಂಗ್ ಸಿಬ್ಬಂದಿಯನ್ನು ಹಳ್ಳಿಗಳಿಗೆ ಕಳಿಸಿ ಚಿಕಿತ್ಸೆ ಕೊಡಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈಗಾಗಲೇ ಪೈಲಟ್‌ ಕಾರ್ಯಕ್ರಮ ಅನುಷ್ಠಾನಕ್ಕೆ ಬಂದಿದ್ದು, ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು. ಪ್ರತಿ 2 ದಿನಗಳಿಗೊಮ್ಮೆ ಹಳ್ಳಿಗಳಿಗೆ ತೆರಳಿ ತಪಾಸಣೆ ನಡೆಸಲಿರುವ ವೈದ್ಯರ ತಂಡ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರಿಗೆ ತಾಲ್ಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಿದ್ದಾರೆ ಎಂದರು.

ಎಂಬಿಬಿಎಸ್‌ ಹಾಗೂ ನರ್ಸಿಂಗ್‌ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು. ಈಗಾಗಲೇ 1,800ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ಮುಂದೆ ಬಂದಿದ್ದಾರೆ. ಅವರಿಗೆ ಪಿಪಿಇ ಕಿಟ್‌, ಸ್ಯಾನಿಟೈಸರ್‌, ಮಾಸ್ಕ್ ಸೇರಿದಂತೆ ಅಗತ್ಯ ವೈದ್ಯಕೀಯ ಪರಿಕರಗಳನ್ನು ಸರ್ಕಾರ ನೀಡಲಿದೆ ಎಂದರು.

ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರಿಸಬೇಕು ಎಂಬುದು ವೈಯಕ್ತಿಕ ಅಭಿಪ್ರಾಯ. ಆದರೆ, ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ತೆಗೆದುಕೊಳ್ಳಲಿದ್ದಾರೆ. ಲಾಕ್‌ಡೌನ್ ಮುಂದುವರಿಸಿದ ಮಹಾರಾಷ್ಟ್ರ, ಕೇರಳ, ದೆಹಲಿಯಲ್ಲಿ ಸೋಂಕು ಇಳಿಮುಖವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲೂ ಲಾಕ್‌ಡೌನ್‌ ಮುಂದುವರಿಸುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು