ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ಕೃಷ್ಣ ಮಠಕ್ಕೆ ಸೋಮವಾರ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿದರು.
ಬೆಳಗ್ಗಿನಿಂದಲೇ ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದ ಭಕ್ತರು, ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡರು.
ಶ್ರೀಕೃಷ್ಣ ಮಾಸೋತ್ಸವದ ಅಂಗವಾಗಿ ನಡೆದ ಡೋಲೋತ್ಸವವನ್ನು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು.
ಮಠದ ರಾಜಾಂಗಣದಲ್ಲಿ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ ಏರ್ಪಡಿಸಲಾಗಿತ್ತು.