ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇರು ವ್ಯಕ್ತಿತ್ವದ ಅಟಲ್ ಜೀ: ಕುಯಿಲಾಡಿ ಸುರೇಶ್ ನಾಯಕ್

Last Updated 17 ಆಗಸ್ಟ್ 2022, 5:05 IST
ಅಕ್ಷರ ಗಾತ್ರ

ಉಡುಪಿ: ಶ್ರೇಷ್ಠ ಸಂಸದೀಯ ಪಟು, ಕವಿ ಹೃದಯದ ಮೇರು ವ್ಯಕ್ತಿತ್ವದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಅಟಲ್‌ಜೀ 4ನೇ ವರ್ಷದ ಪುಣ್ಯ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತೀಯ ಜನ ಸಂಘದ ನಂತರ ಭಾರತೀಯ ಜನತಾ ಪಾರ್ಟಿಯ ಪ್ರಥಮ ಅಧ್ಯಕ್ಷರಾಗಿ, ವಿರೋಧ ಪಕ್ಷದ ನಾಯಕರಾಗಿ, ವಿದೇಶಾಂಗ ಸಚಿವರಾಗಿ ಮೂರು ಬಾರಿ ದೇಶದ ಪ್ರಧಾನಿಯಾಗಿ ವಾಜಪೇಯಿ ಅವರು ಅತ್ಯಮೂಲ್ಯ ಸೇವೆ ಸಲ್ಲಿಸಿದ್ದಾರೆ.

ಅವರ ಆಡಳಿತದಲ್ಲಿ ದೇಶ ಮಹತ್ತರ ಅಭಿವೃದ್ಧಿ ದಾಖಲಿಸಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿಗಳ ಪರಿಕಲ್ಪನೆಯನ್ನು ದೇಶಕ್ಕೆ ನೀಡಿದ ಪರಿಣಾಮ ಗುಣಮಟ್ಟದ ರಸ್ತೆಗಳು ನಿರ್ಮಾಣಗೊಳ್ಳಲು ಸಾಧ್ಯವಾಗಿದೆ. ಅವರ ನಡೆ-ನುಡಿ, ಆಚಾರ ವಿಚಾರಗಳನ್ನು ನೆನಪಿಸಿಕೊಳ್ಳುವುದು ಕಾರ್ಯಕರ್ತರಿಗೆ ಸ್ಫೂರ್ತಿದಾಯಕ ಎಂದು ಕುಯಿಲಾಡಿ ಹೇಳಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ ‘ಜೀವನದ ಸರ್ವಸ್ವವನ್ನೂ ಉದಾತ್ತ ವಿಚಾರ, ತತ್ವ ಮತ್ತು ಬದ್ಧತೆಗೆ ಮುಡಿಪಾಗಿಟ್ಟು ರಾಜಕೀಯ ಕ್ಷೇತ್ರದಲ್ಲೂ ಮಾದರಿಯಾಗಿರಬಹುದು ಎಂಬುದನ್ನು ತೋರಿಸಿಕೊಟ್ಟ ಮಹಾನ್ ಚೇತನರು ಎಂದರು.

ಈ ಸಂದರ್ಭ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT