ಬ್ರಹ್ಮಾವರ: ಸಂಜೀವಿನಿ ಸಂಘದ ಮಹಿಳೆಯರು ಬಹಳ ಉತ್ಸುಕತೆಯಿಂದ ಆಟಿಡೊಂಜಿ ಕೂಟ ಮಾಡುವ ಮೂಲಕ ಇನ್ನಷ್ಟು ಸಂಘಟನೆ ಮತ್ತುಪಾಲ್ಗೊಳ್ಳುವಿಕೆಗೆ ಸ್ಫೂರ್ತಿ ನೀಡಿದಂತಾಗುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ ಸಂಜೀವಿನಿ ಒಕ್ಕೂಟಗಳು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿ ಎಂದುಎನ್ಆರ್ಎಲ್ಎಂನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಹೇಳಿದರು.

ಚೇರ್ಕಾಡಿ ಪೇತ್ರಿಯ ಸಮೃದ್ಧಿ ಮಹಿಳಾ ಮಂಡಳಿಯಲ್ಲಿ ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ, ನೆಹರೂ ಯುವ ಕೇಂದ್ರ ಉಡುಪಿ ಮತ್ತು ಚೇರ್ಕಾಡಿಯ ಸಮೃದ್ಧಿ ಮಹಿಳಾ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಆಹಾರ ಪೌಷ್ಟಿಕತೆ ಆರೋಗ್ಯ ಹಾಗೂ ನೀರು ನೈರ್ಮಲ್ಯ ಕಾರ್ಯಕ್ರಮದಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಸಂಜೀವಿನಿ ಸ್ವಸಹಾಯ ಗುಂಪಿನ ಮಹಿಳೆಯರಿಗೆ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚೇರ್ಕಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಭಟ್ ದೀಪ ಬೆಳಗಿಸಿ ಶುಭ ಹಾರೈಸಿದರು.

ಮಹಿಳಾ ಮಂಡಳಿಯ ಅಧ್ಯಕ್ಷೆ ಪ್ರಸನ್ನಾ ಪ್ರಸಾದ್ ಭಟ್ ಅಧ್ಯಕ್ಷತೆ ವಹಿಸಿದ್ದರು.

ಡಾ. ಪ್ರಿಯಾಂಕ ಎನ್., ಆಹಾರ ಪೌಷ್ಟಿಕತೆ ಮತ್ತು ಮಹಿಳೆಯರ ಆರೋಗ್ಯ ಆಹಾರ ಸೇವನೆ ಹಾಗೂ ನಾವು ದಿನನಿತ್ಯ ಸೇವಿಸುವ ಆಹಾರ ಹಾಗೂ ಅದರ ಸಮತೋಲನದ ಬಗ್ಗೆ ಮಾಹಿತಿ ನೀಡಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಭಾಷ್ ಖಾರ್ವಿ, ಎನ್ಆರ್ಎಲ್ಎಂನ ಜಯಮಾಲಾ, ವಲಯ ಮೇಲ್ವಿಚಾರಕಿ ಸ್ವಾತಿ ಇದ್ದರು. ಇದೇ ಸಂದರ್ಭ ಪ್ರತಿಭಾನ್ವಿತ ವಿದ್ಯಾರ್ಥಿನಿ ಸನ್ಯಾ ಅವರನ್ನು ಸನ್ಮಾನಿಸಲಾಯಿತು. ಲತಾ ಎಸ್ ಶೆಟ್ಟಿ ಸ್ವಾಗತಿಸಿದರು. ಜಯಮಾಲಾ ವಂದಿಸಿದರು. ವನಿತಾ ಪಿ. ಶೆಟ್ಟಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.