ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ| ಕಾಯಕ ಶುದ್ದಿಯಿಂದ ಆತ್ಮ ಶುದ್ದಿ: ಕೂರ್ಮರಾವ್

ದೇವರ ದಾಸಿಮಯ್ಯ ಜಯಂತಿಯಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್
Last Updated 26 ಮಾರ್ಚ್ 2023, 12:29 IST
ಅಕ್ಷರ ಗಾತ್ರ

ಉಡುಪಿ: ಕಾಯಕ ಶ್ರದ್ದೆ ಮತ್ತು ಭಕ್ತಿಯಿಂದ ಮನಸ್ಸು ಮತ್ತು ಆತ್ಮಶುದ್ದಿ ಸಾದ್ಯ ಎಂಬ ದೇವರ ದಾಸಿಮಯ್ಯ ಸಂದೇಶ ಎಲ್ಲ ಕಾಲಕ್ಕೂ ಪ್ರಸ್ತುತ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಹೇಳಿದರು.

ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ದೇವರ ದಾಸಿಮಯ್ಯ ಜಯಂತಿಯಲ್ಲಿ ಮಾತನಾಡಿ, ಕಾಯಕದಲ್ಲಿ ಶ್ರದ್ಧೆ ಭಕ್ತಿ ಇದ್ದರೆ ಅಭಿವೃದ್ಧಿಯ ಜತೆಗೆ ನೆಮ್ಮದಿಯ ಜೀವನ ಸಾಗಿಸಬಹುದು. ದೇವರ ದಾಸಿಮಯ್ಯ ಕಾಯಕ ಶ್ರದ್ದೆ ಮತ್ತು ವಚನಗಳ ಮೂಲಕ ಸಮಾಜಕ್ಕೆ ನೀಡಿರುವ ಸಂದೇಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.

ದೇವರ ದಾಸಿಮಯ್ಯ ಕುರಿತು ಉಪನ್ಯಾಸ ನೀಡಿದ ಗಿರೀಶ್ ಶೆಟ್ಟಿಗಾರ್ ಮಾತನಾಡಿ, ಆದ್ಯ ವಚನಕಾರ ಎಂದು ಕರೆಯಲ್ಪಡುವ ದೇವರ ದಾಸಿಮಯ್ಯ ಸಮಾಜದಲ್ಲಿದ್ದ ಮೂಢನಂಬಿಕೆಗಳು ಮತ್ತು ಜನರಲ್ಲಿದ್ದ ಅಜ್ಞಾನ ತೊಡೆದುಹಾಕಲು ಪ್ರಯತ್ನಿಸಿದ್ದರು. ಜೀವನದಲ್ಲಿ ಬರುವ ಅಡೆ ತಡೆಗಳಿಗೆ ಎದೆಗುಂದದೆ ಶಾಂತಚಿತ್ತದಿಂದ ದೃಢವಾಗಿ ಎದುರಿಸಿದರೆ ಜೀವನ ಸುಗಮವಾಗಲಿದೆ. ಮನಃಶುದ್ದಿಯಿಂದ ಕಾಯಕ ಮಾಡಿದರೆ ದೇವರು ಒಲಿಯುತ್ತಾನೆ. ರಾಮನಾಥ ಎಂಬ ಅಂಕಿತನಾಮದಿಂದ 150ಕ್ಕೂ ಅಧಿಕ ವಚನಗಳನ್ನು ದೇವರ ದಾಸಿಮಯ್ಯ ರಚಿಸಿದ್ದಾರೆ ಎಂದರು.

ಸಭೆಯಲ್ಲಿ ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಜಿಲ್ಲಾ ಜವಳಿ ಮತ್ತು ಕೈಮಗ್ಗ ಇಲಾಖೆಯ ಸಹಾಯಕ ನಿರ್ದೇಶಕ ಶಿವಶಂಕರ್, ದಕ್ಷಿಣ ಕನ್ನಡ ಪದ್ಮಶಾಲಿ ಸಂಘದ ಅಧ್ಯಕ್ಷ ರಾಮದಾಸ ಶೆಟ್ಟಿಗಾರ್, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಲಕ್ಷ್ಮಣ ಕೊಡಿಯಾಲ್‌ಬೈಲು, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಾಮ ನಿರ್ದೇಶಿತ ಸದಸ್ಯ ಮಾದವ ಶೆಟ್ಟಿಗಾರ್ ಕೆರೆಕಾಡು, ಉಡುಪಿ ಪ್ರಾಥಮಿಕ ನೇಕಾರರ ಸಹಕಾರ ಸಂಘದ ಅಧ್ಯಕ್ಷ ರತ್ನಾಕರ ಇಂದ್ರಾಳಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ನಮ್ಮ ಭೂಮಿಯ ರಾಮಾಂಜಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT