ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ: ದೂರು

7

ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ: ದೂರು

Published:
Updated:

ಉಡುಪಿ: ಹಳೆಯ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಸುನೀಲ್‌ ಡಿಸೋಜ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಸೋಮವಾರ ಹಲ್ಲೆ ನಡೆಸಿದ್ದಾರೆ.

ಬಡಾನಿಡಿಯೂರಿನಲ್ಲಿರುವ ಸುನೀಲ್‌ ಡಿಸೋಜ ಅವರ ನಿವಾಸಕ್ಕೆ ನುಗ್ಗಿದ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಈ ಸಂಬಂಧ ಸಂದೀಪ್‌ ಎಂಬ ಇಬ್ಬರ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮ ಪ್ರವೇಶ, ಹಲ್ಲೆ, ಬೆದರಿಕೆ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ಬಡಾನಿಡಿಯೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಮೇಶ್‌ ಪೂಜಾರಿ ಅವರ ಬೆಂಬಲಿಗರು ಏಕಾಏಕಿ ಮನೆಗೆ ನುಗ್ಗಿ, ರಸ್ತೆಗೆ ಸಿಸಿಟಿವಿ ಕ್ಯಾಮೆರಾ ಹಾಕಿಸಿರುವ ಉದ್ದೇಶ ಏನು ಎಂದು ಪ್ರಶ್ನಿಸಿ ಹಲ್ಲೆ ನಡೆಸಿದರು. ದಾಂಧಲೆ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿದೆ ಎಂದು ಸುನೀಲ್‌ ಡಿಸೋಜ ದೂರಿನಲ್ಲಿ ಆರೋಪಿಸಿದ್ದಾರೆ.‌

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !