ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಯಂಚಾಲಿತ ಚರಂಡಿ ಸ್ವಚ್ಛಗೊಳಿಸುವ ಯಂತ್ರ

ಮೂಡ್ಲಕಟ್ಟೆ : ಎಂಐಟಿ ವಿದ್ಯಾರ್ಥಿಗಳ ಆವಿಷ್ಕಾರ
Last Updated 9 ಆಗಸ್ಟ್ 2022, 5:20 IST
ಅಕ್ಷರ ಗಾತ್ರ

ಕುಂದಾಪುರ: ಇಲ್ಲಿಗೆ ಸಮೀಪದ ಮೂಡ್ಲುಕಟ್ಟೆ ತಾಂತ್ರಿಕ ವಿದ್ಯಾಲಯದ ಯಾಂತ್ರಿಕ ವಿಭಾಗದ ವಿದ್ಯಾರ್ಥಿಗಳಾದ ರಿಬ್ಜೂ ಆರ್, ಸ್ವಸ್ತಿಕ್ ಕುಮಾರ್, ಶಮಿತ ಶೆಟ್ಟಿ ಹಾಗೂ ಅರ್ಜುನ್ ಡಿ.ಸಿ ಅವರ ತಂಡವು ‘ಸ್ವಯಂ ಚಾಲಿತ ಚರಂಡಿ ಸ್ವಚ್ಛಗೊಳಿಸುವ ಯಂತ್ರ‘ ಅಭಿವೃದ್ಧಿಪಡಿಸಿದೆ.

ಈ ಯಂತ್ರದ ಮೂಲಕ ಚರಂಡಿ ಸ್ವಚ್ಛಗೊಳಿಸಬಹುದಾಗಿದ್ದು, ಚರಂಡಿಯಲ್ಲಿನ ಕಸ, ಗಾಜಿನ ಬಾಟಲಿ, ಪ್ಯಾಸ್ಟಿಕ್‌ ತ್ಯಾಜ್ಯವನ್ನು ತೆಗೆಯಬಹುದು. ಪ್ರಾಧ್ಯಾಪಕ ಡಾ.ಬಸವರಾಜ ಕಾಂಬಳೆ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಯಂತ್ರ ಅಭಿವೃದ್ಧಿಪಡಿಸಿದ್ದಾರೆ.

ಕಾಲೇಜಿನ ಯಾಂತ್ರಿಕ ವಿಭಾಗದ ಮುಖ್ಯಸ್ಥ ತಿಮ್ಮಪ್ಪ ಡಿ.ಎಸ್ ಅವರ ಮಾರ್ಗದರ್ಶನದಲ್ಲಿ ಈಚೆಗೆ ಯಂತ್ರ ಪ್ರಾತ್ಯಕ್ಷಿಕೆ ನಡೆಯಿತು. ವಿದ್ಯಾರ್ಥಿಗಳ ಪ್ರಯತ್ನಕ್ಕೆ ಎಂಐಟಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ಧಾರ್ಥ್ ಜೆ.ಶೆಟ್ಟಿ, ಪ್ರಾಂಶುಪಾಲ ಡಾ.ಚಂದ್ರರಾವ್ ಮದಾನೆ, ಉಪಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿಸೋಜಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT