ಸೋಮವಾರ, ಮಾರ್ಚ್ 20, 2023
24 °C

ಮಹಾಬಲ ದೇವಾಡಿಗರಿಗೆ ಗುರು ವೀರಭದ್ರ ನಾಯಕ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಉಡುಪಿಯ ಯಕ್ಷಗಾನ ಕೇಂದ್ರದಿಂದ ಕೊಡಮಾಡುವ ಕೇಂದ್ರದ ಪ್ರಥಮ ಗುರು ವೀರಭದ್ರ ನಾಯಕ ಪ್ರಶಸ್ತಿಯನ್ನು ಬಡಗುತಿಟ್ಟಿನ ಮೇರು ಕಲಾವಿದ ಮಹಾಬಲ ದೇವಾಡಿಗ ಕಮಲಶಿಲೆ ಅವರಿಗೆ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮಾಹೆಯ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ‘ಗುರು ವೀರಭದ್ರ ನಾಯಕರು ನೀಡಿದ ಕೊಡುಗೆಯನ್ನು ಸ್ಮರಿಸಲು ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಯಕ್ಷಗಾನದ ಕೊಡುಗೆಗಾಗಿ ದಶಾವತಾರಿ ಎಂಬ ಬಿರುದನ್ನು ಹೊಂದಿದ್ದ ವೀರಭದ್ರ ನಾಯಕರು ಯಕ್ಷಗಾನ ಕೇಂದ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದರು.

ಮಾಹೆಯ ಸಹ ಕುಲಪತಿ ಡಾ. ನಾರಾಯಣ ಸಭಾಹಿತ್ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಡಾ.ಪಿ.ಎಲ್.ಎನ್. ರಾವ್ ಉಪಸ್ಥಿತರಿದ್ದರು. ಸಲಹಾ ಸಮಿತಿಯ ಅಧ್ಯಕ್ಷ ಪಳ್ಳಿ ಕಿಶನ್ ಹೆಗ್ಡೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಲಹಾ ಸಮಿತಿ ಸದಸ್ಯರಾದ ಪ್ರೊ.ಎಸ್.ವಿ.ಉದಯ ಕುಮಾರ್ ಶೆಟ್ಟಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ವಂದಿಸಿದರು. ರಾಘವೇಂದ್ರ ತುಂಗ ಕಾರ್ಯಕ್ರಮ ನಿರ್ವಹಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು