ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯುಧ ಪೂಜೆಗೆ ಉಡುಪಿಯ ಕಾಪು ಠಾಣೆ ಪೊಲೀಸರಿಂದಲೂ ಕೇಸರಿ ಧಿರಿಸು

Last Updated 17 ಅಕ್ಟೋಬರ್ 2021, 10:45 IST
ಅಕ್ಷರ ಗಾತ್ರ

ಉಡುಪಿ: ಕಾಪು ಠಾಣೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕವಾಗಿ ಕೇಸರಿ ಉಡುಪು ಧರಿಸಿ ಆಯುಧಪೂಜೆಯಲ್ಲಿ ಪಾಲ್ಗೊಂಡಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.

ಪೊಲೀಸರು ಕೇಸರಿ ಉಡುಪು ಧರಿಸಿರುವ ಫೋಟೊ ಜಾಲತಾಣಗಳಲ್ಲಿ ಹೆಚ್ಚು ಸುದ್ದಿಯಾಗಿದ್ದು, ಪೊಲೀಸ್ ಇಲಾಖೆಯನ್ನು ಕೇಸರಿಕರಣಗೊಳ್ಳುತ್ತಿರುವುದು ಆತಂಕಕಾರಿ ಎಂದು ಕೆಲವರು ಹೇಳಿದರೆ, ಕೆಲವರು ಸಮರ್ಥಿಸಿಕೊಂಡಿದ್ದಾರೆ.

ಘಟನೆ ಬಗ್ಗೆ ಎಸ್‌ಪಿ ಎನ್‌.ವಿಷ್ಣುವರ್ಧನ್ ಪ್ರತಿಕ್ರಿಯೆ ನೀಡಿದ್ದು, ಕಾಪು ಠಾಣೆಯಲ್ಲಿ ಕೇಸರಿ ಉಡುಪಿನಲ್ಲಿ ಆಯುಧ ಪೂಜೆ ಆಚರಿಸಿರುವ ವಿಚಾರ ಗಮನಕ್ಕೆ ಬಂದಿಲ್ಲ, ಮಾಹಿತಿ ಪಡೆಯುವುದಾಗಿ ತಿಳಿಸಿದ್ದಾರೆ.

ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಹಿಂದೂ ಸಂಘಟನೆಗಳ ಮುಖಂಡರಂತೆ ಕೇಸರಿ ಶಾಲು, ಬಿಳಿಟೊಪ್ಪಿ, ಕುರ್ತಾ ತೊಟ್ಟು ಆಯುಧಪೂಜೆ ನೆರವೇರಿಸಿ, ಬಳಿಕ ಸಾಮೂಹಿಕವಾಗಿ ಫೋಟೊ ತೆಗೆಸಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಒಳಗಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT