ಬುಧವಾರ, ಜೂನ್ 29, 2022
25 °C
ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ

ದೇವರ ಭಕ್ತಿ, ದೇಶ ಭಕ್ತಿ ಬದುಕಿನ ಭಾಗವಾಗಿರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಭಾರತದ ಸಂವಿಧಾನ ಜಗತ್ತಿನ ಇತರೆ ರಾಷ್ಟ್ರಗಳಿಗಿಂತ ಶ್ರೇಷ್ಠವಾಗಿದೆ ಎಂದು ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

ಶನಿವಾರ ಅಜ್ಜರಕಾಡು ಪುರಭವನದಲ್ಲಿ ನಡೆದ ‘ಆಜಾದೀ ಕಾ ಅಮೃತ ವರ್ಷ’ ಸ್ವಾತಂತ್ರ್ಯ ಯೋಧರ ಸಂಸ್ಮರಣೆ–ಸಂವಿಧಾನ ವ್ಯಾಖ್ಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿ, ‘ದೇವರ ಭಕ್ತಿ ಹಾಗೂ ದೇಶ ಭಕ್ತಿ ಬದುಕಿನ ಭಾಗವಾಗಬೇಕು. ಸಂವಿಧಾನ ನೀಡಿರುವ ಹಕ್ಕುಗಳ ಜತೆಗೆ ನಿರ್ವಹಿಸಬೇಕಾದ ಜವಾಬ್ದಾರಿಯ ಅರಿವಿರಬೇಕು’ ಎಂದು ಸಲಹೆ ನೀಡಿದರು.

ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ದೇಶದ ಸಂವಿಧಾನವು ಶ್ರೇಷ್ಠ ಹಾಗೂ ಉತ್ಕೃಷ್ಟವಾಗಿದ್ದು ಯುವ ಜನತೆಗೆ ಸಂವಿಧಾನದ ಬಗ್ಗೆ ತಿಳಿವಳಿಕೆ ಮೂಡಬೇಕು. ಸಕಾರಾತ್ಮಕ ಚರ್ಚೆಗಳು ನಡೆಯಬೇಕು ಎಂದು ಆಶಿಸಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟಾರು ರತ್ನಾಕರ ಹೆಗ್ಡೆೆ, ಉದ್ಯಮಿಗಳಾದ ಬಾಲಾಜಿ ರಾಘವೇಂದ್ರ ಆಚಾರ್ಯ, ಆನಂದ ಸಿ.ಸುವರ್ಣ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್, ಪ್ರೊ.ರಾಧಾಕೃಷ್ಣ ಆಚಾರ್ಯ, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಸಮಾಜ ಸೇವಕ ಶಂಭು ಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್ ಇದ್ದರು.

ಭಾರತ ಸಂವಿಧಾನದ ಬಗ್ಗೆೆ ಡಾ.ಪಿ. ಅನಂತಕೃಷ್ಣ ಭಟ್ ಉಪನ್ಯಾಸ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಅಶೋಕ್ ಕಾಮತ್ ಸ್ವಾಗತಿಸಿದರು. ಸಮಾಜ ವಿಜ್ಞಾನ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಉದಯ ಕುಮಾರ್ ವಂದಿಸಿದರು. ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್‌.ಸಾಮಗ ಕಾರ್ಯಕ್ರಮ ಸಂಯೋಜಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.