‘80 ರಿಂದ 100 ಮನೆಗಳಿಗೆ ಭೇಟಿ’
ಜಿಲ್ಲೆಯಲ್ಲಿನ ಒಟ್ಟು ಕುಟುಂಬಗಳ ಸಂಖ್ಯೆಗೆ ಅನುಗುಣವಾಗಿ ಪ್ರತಿ ಸಮೀಕ್ಷೆದಾರರು ಕನಿಷ್ಠ 80 ರಿಂದ 100 ಮನೆಗಳಿಗೆ ಖುದ್ದು ಭೇಟಿ ನೀಡಿ ಸಮೀಕ್ಷೆ ಮಾಡಬೇಕಾಗುತ್ತದೆ. ರಾಜ್ಯ ಮಟ್ಟದಲ್ಲಿ ಮಾಸ್ಟರ್ ಟ್ರೈನರ್ಸ್‌ಗಳ ತರಬೇತಿಯು ಇದೇ 8 ರಂದು ನಡೆಯಲಿದ್ದು ಜಿಲ್ಲಾ ಮಟ್ಟದಲ್ಲಿ 9ರಿಂದ 11 ರ ವರೆಗೆ ತರಬೇತಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲೆಯಲ್ಲಿ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಸಂಬಂಧಿಸಿ ಸರ್ಕಾರದಿಂದ ನೀಡಲಾಗುವ ಸೂಚನೆ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಸಿಬ್ಬಂದಿ ತಪ್ಪದೆ ಪಾಲಿಸಬೇಕು ಎಂದರು.