ಉಡುಪಿ: ವಿದ್ಯಾರ್ಥಿಗಳು ದಿನಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಅದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ನಿರಂತರ ಕಲಿಕೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಸರ್ಕಾರಿ ಸೇವೆಗೆ ಸೇರಬಹುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ. ಸಿದ್ದಲಿಂಗಪ್ಪ ಹೇಳಿದರು.

ಬಡಗಬೆಟ್ಟು ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ವತಿಯಿಂದ ನಗರದ ಅಜ್ಜರಕಾಡು ಟೌನ್ಹಾಲ್ನಲ್ಲಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕಗಳ ವಿತರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿಭೆ ಇದ್ದರೆ ಪುರಸ್ಕಾರ, ಅಧಿಕಾರ ದೊರೆಯುತ್ತದೆ. ಇಂದು ಅಪರಾಧಿಗಳಿಗೆ ಸಿಗುವ ಪ್ರಚಾರ, ಪ್ರತಿಭಾವಂತ ಸಾಧಕ ಮಕ್ಕಳಿಗೆ ಸಿಗುತ್ತಿಲ್ಲ. ಇದು ದುರಂತ ಎಂದರು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ. ಮಾತನಾಡಿ, ಕನ್ನಡ ಶಾಲೆಗಳ ಮೂಲ ಸೌಲಭ್ಯಗಳ ಕೊರತೆಯನ್ನು ಮನಗಂಡು ನೆರವಾಗುತ್ತಿರುವ ಬಡಗಬೆಟ್ಟು ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಕಾರ್ಯ ಶ್ಲಾಘನೀಯ ಎಂದರು.

ಜಿಲ್ಲೆಯ 25 ಕನ್ನಡ ಮಾಧ್ಯಮ ಶಾಲೆಗಳಿಗೆ ಅಂದಾಜು ₹12 ಲಕ್ಷ ಮೌಲ್ಯದ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಎಂಜಿಎಂ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ವಿಶೇಷ ಉಪನ್ಯಾಸ ನೀಡಿದರು.

ಸಂಘದ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್ ಇದ್ದರು. ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು. ಮಣಿಪಾಲ ಶಾಖಾ ವ್ಯವಸ್ಥಾಪಕ ನವೀನ್ ಕೆ. ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.