ಕುಂದಾಪುರ: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕುಂದಾಪುರ ಶಾಖೆಯ ಉದ್ಘಾಟನೆ ಮೇ 22ರಂದು ಬೆಳಿಗ್ಗೆ 10.30ಕ್ಕೆ ಶ್ರೀ ನಂದಿಕೇಶ್ವರ ಟವರ್ಸ್ನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎ. ಕಿರಣ್ಕುಮಾರ್ ಕೊಡ್ಗಿ, ಯಶ್ಪಾಲ್ ಸುವರ್ಣ, ಮುಖಂಡ ಕೆ. ಜಯಪ್ರಕಾಶ್ ಹೆಗ್ಡೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಮಹೇಶ್ ಹೆಗ್ಡೆ ಮೊಳಹಳ್ಳಿ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್ ಹಾಗೂ ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ಕುಮಾರ್ ಜೆ. ಭಾಗವಹಿಸಲಿದ್ದಾರೆ ಎಂದರು.

107 ವರ್ಷಗಳ ಸಂಸ್ಥೆಯಲ್ಲಿ 23,000 ಸದಸ್ಯರು ಇದ್ದು ₹662 ಕೋಟಿ ಠೇವಣಿ ಹಾಗೂ ₹528 ಕೋಟಿ ಹೊರ ಬಾಕಿ ಸಾಲ ಹೊಂದಿದೆ. ₹113.24 ಕೋಟಿ ನಿಧಿ ಹಾಗೂ ₹284.07 ಕೋಟಿ ಹೂಡಿಕೆ ಇದ್ದು ಒಟ್ಟು ₹795 ಕೋಟಿ ದುಡಿಯುವ ಬಂಡವಾಳ ಹೊಂದಿದೆ. 2025-26ನೇ ಸಾಲಿನಲ್ಲಿ ₹4062.29 ಕೋಟಿ ವಹಿವಾಟು ನಡೆಸಿ ₹18.13 ಕೋಟಿ ಲಾಭ ಗಳಿಸಿದೆ. ಎರಡು ಬಾರಿ ರಾಷ್ಟ್ರ ಪ್ರಶಸ್ತಿ, 9 ರಾಜ್ಯ, 19 ಜಿಲ್ಲಾ ಪ್ರಶಸ್ತಿ ಹಾಗೂ 72ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ‘ಸಹಕಾರ ಮಾಣಿಕ್ಯ’ ಗೌರವ ಪಡೆದುಕೊಂಡಿದೆ ಎಂದು ಅವರು ತಿಳಿಸಿದರು.

ಉತ್ತಮ ಆಡಳಿತ, ಗ್ರಾಹಕರ ವಿಶ್ವಾಸ, ತಂತ್ರಜ್ಞಾನ ಆಧಾರಿತ ಸೇವೆ ಹಾಗೂ ಸಾಮಾಜಿಕ ಬದ್ಧತೆಯ ಮೂಲಕ ಜನಮನ ಗೆದ್ದಿರುವ ಸಂಸ್ಥೆಯಿಂದ ಪ್ರತಿ ವರ್ಷ ಸುಮಾರು ₹25 ಲಕ್ಷವನ್ನು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗುತ್ತಿದೆ. ಡಿಜಿಟಲೀಕರಣದ ಭಾಗವಾಗಿ ಚೇತನಾ ಮೊಬೈಲ್ ಆ್ಯಪ್ ಪರಿಚಯಿಸಲಾಗಿದೆ ಎಂದರು.

ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್, ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್, ಶಾಖಾ ವ್ಯವಸ್ಥಾಪಕ ಸಮರ್ಥ್ ಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-28-1529276148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.