ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಂದೂರಿನಲ್ಲಿ ವ್ಯಸನ ಮುಕ್ತ ದಿನಾಚರಣೆ

ಶಿವಯೋಗಿಗಳ ಜನ್ಮ ದಿನಾಚರಣೆ:ವ್ಯಸನ ಮುಕ್ತ ದಿನಾಚರಣೆ
Last Updated 2 ಆಗಸ್ಟ್ 2022, 2:45 IST
ಅಕ್ಷರ ಗಾತ್ರ

ಬೈಂದೂರು: ತಾಲ್ಲೂಕು ಆಡಳಿತ, ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಸೋಮವಾರ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್‌ ಮಾತನಾಡಿ ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮತ್ತು ಯುವಕರು ಮುಂದಾಗಬೇಕು, ಕುತೂ ಹಲಕ್ಕಾಗಿ ಯಾರೊಬ್ಬರೂ ಮಾದಕ ದ್ರವ್ಯ ಬಳಸಬಾರದು. ಮಾನಸಿಕ ಅಸ್ವಸ್ಥರನ್ನು ಗುರುತಿಸಿ ಚಿಕಿತ್ಸೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಂತೆ ಮಾಡುವುದು ಗುರುತರ ನಾಗರಿಕ ಸಮಾಜದ ಕರ್ತವ್ಯ. ಖಿನ್ನತೆಯಿಂದ ಮಾನಸಿಕ ದುಃಖ ಉಂಟಾಗಿ ವ್ಯಕ್ತಿಯ ಸಾಮರ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದರು.

ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಪಿ ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಾಧ್ಯಾಪಕ ಪ್ರೊ. ಬಾಲ ಕೃಷ್ಣ ಮದ್ದೋಡಿ ಮಾತನಾಡಿ, ಜೀವನ ರೂಪಿಸುವಾಗ ಸೂಕ್ತ ಮಾರ್ಗದರ್ಶಕರ ಆಯ್ಕೆ ಅತ್ಯಂತ ಅವಶ್ಯಕ, ಆಧುನಿಕ ಜಗತ್ತಿನ ಠಾಕು ಠೀಕುಗಳಿಗೆ ಮೈಮರೆಯದೆ ಸಾಮಾಜಿಕ ಪಿಡುಗುಗಳಿಂದ ಸೂಕ್ತ ಅಂತರ ಕಾಯ್ದುಕೊಂಡಲ್ಲಿ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದರು.

ಉಪತಹಶೀಲ್ದಾರ್ ಭೀಮಪ್ಪ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸುರೇಶ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೇಶ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರಾಘವೇಂದ್ರ ಗುಡಿಗಾರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾರ್ಯಧ್ಯಕ್ಷರು ಗಿರೀಶ್ ಬೈಂದೂರು, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು ರಾಮಚಂದ್ರ ಎಸ್. ಇದ್ದರು.

ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹರೀಶ್ ಕೋಟ್ಯಾನ್ ಸ್ವಾಗತಿಸಿದರು. ಉಪನ್ಯಾಸಕ ಉದಯ್ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕ ಸುಧಾಕರ್ ಪಿ. ವಂದಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳಿಂದ ವ್ಯಸನ ಮುಕ್ತ ಭಾರತ ಬೀದಿ ನಾಟಕ ಪ್ರದರ್ಶನಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT