ಬೈಂದೂರು: ಡಾ. ಬಿ.ಆರ್.ಅಂಬೇಡ್ಕರ್ ಜಾತಿ ಆಧರಿತ ತಾರತಮ್ಯದ ವಿರುದ್ಧ ಹೋರಾಡಲು ಮತ್ತು ಸಮ ಸಮಾಜ ನಿರ್ಮಾಣಕ್ಕೆ ತಮ್ಮ ಜೀವನ ಮುಡಿಪಾಗಿಟ್ಟರು ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಸತೀಶ ಬಟವಾಡಿ ಹೇಳಿದರು.

ಶಾರದಾ ವೇದಿಕೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಸಂಘದ 31ನೇ ವಾರ್ಷಿಕೋತ್ಸವ ಹಾಗೂ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಖಂಬದಕೋಣೆ ಸ.ಹಿ.ಪ್ರಾ ಶಾಲೆಯ ಅಧ್ಯಾಪಕ ಕೆ. ಮಹಾಬಲ ಅಧ್ಯಕ್ಷತೆ ವಹಿಸಿದ್ದರು. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಗದೀಶ ಪೂಜಾರಿ ಹಕ್ಕಾಡಿ, ಶ್ರೀಧರ್ಮಸ್ಥಳ ಭಜನಾ ಪರಿಷತ್ ತಾಲ್ಲೂಕು ಘಟಕದ ಗೌರವಾಧ್ಯಕ್ಷ ರಘುರಾಮ ಪೂಜಾರಿ, ಬೈಂದೂರು ಸ.ಪ.ಪೂ ಕಾಲೇಜಿನ ಉಪನ್ಯಾಸಕ ರಾಘವೇಂದ್ರ ಗುಡಿಗಾರ್, ಸಂಘದ ಗೌರವಾಧ್ಯಕ್ಷ ಗೋಪಾಲ್ ಯಡ್ತರೆ, ಪ್ರಧಾನ ಕಾರ್ಯದರ್ಶಿ ಪಿ. ಕೃಷ್ಣ, ಮಾಜಿ ಅಧ್ಯಕ್ಷ ಜಯರಾಮ ಯಡ್ತರೆ ಇದ್ದರು.

ಉಡುಪಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಂಕರ ಶಿರೂರು ಹಾಗೂ ಕರುನಾಡ ಅಪ್ಪು ರತ್ನ ಪ್ರಶಸ್ತಿ ಪುರಸ್ಕೃತ ಬೆಂಕಿ ಚಿರಂತ್ ಅರೆಹೊಳೆ ಅವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ಬಿ.ಕೆ. ಸ್ವಾಗತಿಸಿದರು. ಸೃಜನ್ಕುಮಾರ್ ವರದಿ ವಾಚಿಸಿದರು. ರಾಘವೇಂದ್ರ ಶಿರೂರು ಕಾರ್ಯಕ್ರಮ ನಿರ್ವಹಿಸಿದರು. ಕೃಷ್ಣ ಎಸ್. ವಂದಿಸಿದರು. ಬಳಿಕ, ಶ್ರೀದುರ್ಗಾ ಕಲಾ ತಂಡ ಹಾರಾಡಿ–ಬ್ರಹ್ಮಾವರ ಅವರಿಂದ ‘ಒಂದಲ್ಲಾ ಒಂದ್ ಸಮಸ್ಯೆ’ ನಗೆನಾಟಕ ಪ್ರದರ್ಶನಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.