ಭಾನುವಾರ, ಜನವರಿ 17, 2021
22 °C

ಕೃಷ್ಣಾಪುರ ಮಠ ಪರ್ಯಾಯ: ಪೂರ್ವಭಾವಿಯಾಗಿ ಬಾಳೆ ಮುಹೂರ್ತ 30

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: 2022ರ ಜನವರಿಯಲ್ಲಿ ಆರಂಭವಾಗುವ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ನ.30ರಂದು ಬಾಳೆ ಮುಹೂರ್ತ ನೆರವೇರಲಿದೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 8.32ಕ್ಕೆ ರಥಬೀದಿಯಲ್ಲಿರುವ ಕೃಷ್ಣಾಪುರ ಮಠದಲ್ಲಿ ಬಾಳೆ ಮುಹೂರ್ತ ನಡೆಯಲಿದೆ. ನಂತರ ಕ್ರಮವಾಗಿ ಅಕ್ಕಿ ಮುಹೂರ್ತ, ಕಟ್ಟಿಗೆ ಮುಹೂರ್ತ ಹಾಗೂ ಅಂತಿಮವಾಗಿ ಭತ್ತ ಮುಹೂರ್ತ ನಡೆಯಲಿವೆ. ಅದಮಾರು ಪರ್ಯಾಯದ ಅವಧಿ ಮುಗಿಯುವವರೆಗೂ ಹಂತಹಂತವಾಗಿ ಮುಹೂರ್ತದ ವಿಧಿವಿಧಾನಗಳು ನಡೆಯಲಿವೆ.

ಇದೇ ವರ್ಷದ ಜನವರಿಯಲ್ಲಿ ಅದಮಾರು ಮಠದ ಪರ್ಯಾಯ ಆರಂಭವಾಗಿದ್ದು, 2022ರ ಜನವರಿಯಲ್ಲಿ ಮುಕ್ತಾಯವಾಗಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.