ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಸಾಧನೆ ಮಾಡಿದ ಉಡುಪಿಯ ರಾಮಾಂಜಿ ನಮ್ಮಭೂಮಿ, ಮುತ್ತಮ್ಮ, ಮನೋಹರ್ ಪ್ರಸಾದ್ ಅವರಿಗೆ ಬ್ಯಾಂಕ್ ಆಫ್ ಬರೋಡಾ ಸಾಧಕ ಪುರಸ್ಕಾರವನ್ನು ಮಂಗಳವಾರ ಪ್ರದಾನ ಮಾಡಲಾಯಿತು.
ಮಂಗಳೂರು ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಅರ್ಹರಿಗೆ ಪುರಸ್ಕಾರ ದೊರೆತಿರುವುದು ಪ್ರಶಸ್ತಿಯ ಮೌಲ್ಯ ಹೆಚ್ಚಿಸಿದೆ. ಬ್ಯಾಂಕ್ ಆಫ್ ಬರೋಡಾ ಪ್ರತಿಭಾವಂತರನ್ನು ಗುರುತಿಸುವ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.
ಪುರಸ್ಕಾರ ಸ್ವೀಕರಿಸಿ ಮಾತನಾಡಿದ ರಾಮಾಂಜಿ, ಸಾಧಕ ಪುರಸ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡಲಿದೆ. ಪುರಸ್ಕಾರ ನೀಡಿದ ಸಂಸ್ಥೆಗೆ ಅಭಾರಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡಾ ಕೊಣಾಜೆ ಶಾಖೆಯ ಹಿರಿಯ ಶಾಖಾ ವ್ಯವಸ್ಥಾಪಕ ಡೇರಿಕ್ ಡಿಸೋಜ, ಮಂಗಳೂರು ವಿವಿಯ ಕುಲಸಚಿವ ಡಾ.ಕಿಶೋರ್ ಕುಮಾರ್ ಸಿ.ಕೆ., ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ, ಪ್ರೊ.ಮೊನಿಕಾ ಸದಾನಂದ, ಪ್ರೊ.ಕೆ.ಕಿಶೋರಿ ನಾಯಕ್ ಉಪಸ್ಥಿತರಿದ್ದರು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.