ಬ್ರಹ್ಮಾವರ: ಬಾರ್ಕೂರು ರೈಲು ನಿಲ್ದಾಣದಲ್ಲಿ ಒಂದೇ ಪ್ಲಾಟ್ ಫಾರ್ಮ್ ಇರುವುದರಿಂದ ಮುಂಬೈಯಿಂದ ಬರುವ ಮತ್ಸ್ಯಗಂಧ ಎಕ್ಸ್ಪ್ರಸ್ ರೈಲಿನ ಕ್ರಾಸಿಂಗ್ ಸಂದರ್ಭದಲ್ಲಿ ಸಮಸ್ಯೆ ಆಗುತ್ತಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿದರು.

ಸಾರ್ವಜನಿಕರಿಂದ ದೂರು ಬಂದಿದ್ದು, ಬಾರ್ಕೂರು ರೈಲ್ವೆ ಹಿತರಕ್ಷಣಾ ಸಮಿತಿಯ ಮನವಿಯ ಮೇರೆಗೆ ಸಂಸದ ಶ್ರೀನಿವಾಸ ಪೂಜಾರಿ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹೊಸ ಪ್ಲಾಟ್ ಫಾರಂ, ಲೂಪ್ ಲೈನ್, ಮಲ್ಸೇತುವೆ ನಿರ್ಮಾಣಕ್ಕೆ ಅಂದಾಜು ಪಟ್ಟಿ ತಯಾರಿಸುವಂತೆ ಸೂಚಿಸಿದರು.

ಕಾರವಾರ ರೈಲ್ವೆ ಪ್ರಾದೇಶಿಕ ಅಧಿಕಾರಿ ಆಶಾ ಶೆಟ್ಟಿ, ಸಿವಿಲ್ ಎಂಜಿನಿಯರ್ ವಿಜಯ್ ಕುಮಾರ್, ರೈಲ್ವೆ ಹೋರಾಟಗಾರ ಗೌತಮ್ ಕುಂದಾಪುರ, ಗಣೇಶ್ ಪುತ್ರನ್, ಬಾರ್ಕೂರು ರೈಲು ಹಿತರಕ್ಷಣಾ ಸಮಿತಿಯ ಪ್ರಮುಖರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಕಾಶ ಶೆಟ್ಟಿ ಯಡ್ತಾಡಿ, ಗಣೇಶ ಶೆಟ್ಟಿ, ರತ್ನಾಕರ ಶೆಟ್ಟಿ, ದೇವದಾಸ್ ಹೊಸ್ಕೆರೆ ಇದ್ದರು.

ಬಾರ್ಕೂರು ರೈಲು ನಿಲ್ದಾಣದ ಸಮಸ್ಯೆಗಳ ಬಗ್ಗೆ ‘ಪ್ರಜಾವಾಣಿ’ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.