ಗುರುವಾರ , ಡಿಸೆಂಬರ್ 5, 2019
24 °C
ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪ್ರಗತಿ ಸಭೆಯಲ್ಲಿ ಮೌನೀಶ್‌ ಮುದ್ಗಿಲ್‌

ಅರ್ಹ ಮತದಾರರ ಹೆಸರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಯ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗದಂತೆ ಮತದಾರರ ಪಟ್ಟಿಯ ಪರಿಶೀಲನೆ, ಸೇರ್ಪಡೆ ಹಾಗೂ ತಿದ್ದುಪಡಿ ಕಾರ್ಯ ಮಾಡಬೇಕು ಎಂದು ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ಮೌನೀಶ್‌ ಮುದ್ಗಿಲ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಚುನಾವಣೆಯ ಸಂದರ್ಭದಲ್ಲಿ ಪ್ರಮುಖ ವ್ಯಕ್ತಿಗಳ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗುವ ಪ್ರಕರಣಗಳು ಕಂಡು ಬರುತ್ತಿವೆ. ಹಾಗಾಗಿ ಜಿಲ್ಲೆಯ ಗಣ್ಯ ವ್ಯಕ್ತಿಗಳು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಸದಸ್ಯರು ಸೇರಿದಂತೆ ಯಾವುದೇ ರಾಜಕೀಯ ವ್ಯಕ್ತಿಗಳ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಅಲ್ಲದೆ, ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಶೇ. 100 ಗುರಿ ಸಾಧನೆ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)