ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸ್ಕಾರ ನೀಡಿದ ಸಮಾಜದ ಗೌರವ ಹೆಚ್ಚಿಸಿ

ಬೀಜಾಡಿ ಮಿತ್ರ ಸಂಗಮ ರಜತ ಮಹೋತ್ಸವ ಸಮಾರೋಪ ಸಂಪನ್ನ
Last Updated 7 ಫೆಬ್ರುವರಿ 2023, 4:58 IST
ಅಕ್ಷರ ಗಾತ್ರ

ಕುಂದಾಪುರ: ಸಂಸ್ಕಾರದ ಬದುಕನ್ನು ನೀಡಿದ ಸಮಾಜದ ಗೌರವ ಹೆಚ್ಚಿಸುವ ಕೆಲಸಗಳು ಆಗಬೇಕು. ಸಂಸ್ಥೆಯನ್ನು ಹುಟ್ಟು ಹಾಕುವುದು ಮುಖ್ಯವಲ್ಲ, ವೃಕ್ಷದಂತೆ ಸಮಾಜಕ್ಕೆ ನೆರಳು ನೀಡುವ ಕೆಲಸಗಳು ಸಮಾಜ ಸೇವಾ ಸಂಸ್ಥೆಗಳಿಂದ ಆಗಬೇಕು. ಈ ನಿಟ್ಟಿನಲ್ಲಿ 25 ವರ್ಷಗಳಲ್ಲಿ ಮಿತ್ರ ಸಂಗಮ ಸಾಧನೆಯ ಹೆಗ್ಗುರುತನ್ನು ಮೂಡಿಸಿದೆ ಎಂದು ಕಾಪು ಕಳತ್ತೂರು ಗುರ್ಮೆ ಫೌಂಡೇಷನ್ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಇಲ್ಲಿಗೆ ಸಮೀಪದ ಬೀಜಾಡಿಯಲ್ಲಿ ಭಾನುವಾರ ನಡೆದ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ರಜತ ಮಹೋತ್ಸವ ‘ರಜತ ಪಥ ನೆರಳು ಬೆಳಕಿನ ಸಹಯಾನ’ದ ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಊರ ಗೌರವ –ನಮ್ಮೂರ ಪ್ರಶಸ್ತಿಯನ್ನು ಪ್ರದಾನ ಮಾಡಿ ಅವರು ಮಾತನಾಡಿದರು.

ತಾಲ್ಲೂಕು ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಮಯೂರ ಗ್ರೂಪ್ಸ್‌ನ ಆಡಳಿತ ನಿರ್ದೇಶಕ ಗೋಪಾಡಿ ಶ್ರೀನಿವಾಸ್ ರಾವ್ ಆಶಯ ಭಾಷಣ ಮಾಡಿದರು. ಹೋಟೆಲ್ ಉದ್ಯಮಿ ರಾಮಚಂದ್ರರಾವ್, ಗೋಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಾ ಪೂಜಾರಿ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಶುಭ ಹಾರೈಸಿದರು.

ಮಿತ್ರ ಸಂಗಮದ ಪ್ರಧಾನ ಕಾರ್ಯದರ್ಶಿ ರಾಜೇಶ್ ಆಚಾರ್ಯ ಬೀಜಾಡಿ, ರಜತ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಶಂಕರನಾರಾಯಣ ಬಾಯಿರಿ, ಗೌರವಾಧ್ಯಕ್ಷ ವಿಶ್ವನಾಥ್ ಹೆಗ್ಡೆ, ಅಧ್ಯಕ್ಷ ದೀಪಾನಂದ ಉಪಾಧ್ಯಾಯ, ಪ್ರಧಾನ ಕಾರ್ಯದರ್ಶಿ ಚಂದ್ರ ಬಿ.ಎನ್ ಇದ್ದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಹಾಗೂ ಕೋಟೇಶ್ವರದ ವೈದ್ಯ ಡಾ.ಶ್ರೀಪಾದ ಹೆಗ್ಡೆ ಅವರಿಗೆ ಊರ ಗೌರವ ನಮ್ಮೂರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಶಕ್ತರಿಗೆ ಸಹಾಯಧನ, ಸ್ವಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಹಾಗೂ ಅಂಗವಿಕಲರಿಗೆ ಊರುಗೋಲು ವಿತರಿಸಲಾಯಿತು.

ಗಾಯಕಿ ಸುಷ್ಮಾ ಬೀಜಾಡಿ ಪ್ರಾರ್ಥಿಸಿದರು. ಮಿತ್ರ ಸಂಗಮದ ಅಧ್ಯಕ್ಷ ಚಂದ್ರಶೇಖರ ಬೀಜಾಡಿ ಸ್ವಾಗತಿಸಿದರು, ಗೌರವಾಧ್ಯಕ್ಷ ವಾದಿರಾಜ್ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರದೀಪ್ ದೇವಾಡಿಗ ಸಹಾಯಧನ ಪಟ್ಟಿ ವಾಚಿಸಿದರು. ಎನ್.ಆರ್.ದಾಮೋದರ ಶರ್ಮ ನಿರೂಪಿಸಿದರು. ರಜತ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಂಕರನಾರಾಯಣ ಬಾಯಿರಿ ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಬೀಜಾಡಿ ಮೂಡು ಶಾಲಾ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ, ಕೆ.ನವೀನಚಂದ್ರ ಕೊಪ್ಪ ನೇತೃತ್ವದ ಶಿವಾನಿ ಮ್ಯೂಸಿಕಲ್ ಆರ್ಕೆಸ್ಟ್ರಾ ತಂಡದವರಿಂದ ಸಂಗೀತ ರಸಮಂಜರಿ, ನೃತ್ಯ ಪ್ರದರ್ಶನ ಜರುಗಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT