ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಅಂತಿಮ ತೀರ್ಪನ್ನು ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಇದೇ 31 ಕ್ಕೆ ಮುಂದೂಡಿ ಶನಿವಾರ ಆದೇಶ ನೀಡಿದೆ.
ಪ್ರಕರಣದ ವಾದ, ಪ್ರತಿವಾದದ ಪ್ರಕ್ರಿಯೆಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಂತಿಮ ತೀರ್ಪನ್ನು ಮೇ 29ರಂದು ಪ್ರಕಟಿಸುವುದಾಗಿ ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಏ.20 ರಂದು ಆದೇಶ ನೀಡಿದ್ದರು.
ಆದರೆ, ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ನ್ಯಾಯಾಲಯಕ್ಕೆ ರಜೆ ಇರುವ ಕಾರಣದಿಂದ ಈ ತೀರ್ಪನ್ನು ಮುಂದೂಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.