ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ- ಪತ್ನಿ, ಪುತ್ರನಿಂದ ಅರ್ಜಿ

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯ ಈಚೆಗೆ ನೀಡಿದ್ದ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹಾಗೂ ಜಾಮೀನು ನೀಡುವಂತೆ ಪ್ರಮುಖ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಹಾಗೂ ಪುತ್ರ ನವನೀತ ಶೆಟ್ಟಿ ಹೈಕೋರ್ಟ್‌ಗೆ ಸೋಮವಾರ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಪಬ್ಲಿಕ್ ಪ್ಯಾಸಿಕ್ಯೂಟರ್‌ಗೆ ನ್ಯಾಯಾಲಯ ಮೂರು ವಾರಗಳ ಗಡುವು ನೀಡಿದೆ. ಪ್ರಕರಣ ಮತ್ತೊಬ್ಬ ಆರೋಪಿ ನಿರಂಜನ ಭಟ್ ಅರ್ಜಿ ಸಲ್ಲಿಸಿಲ್ಲ.
2016ರ ಜುಲೈ 28ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಸುಧೀರ್ಘ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯ ಜೂನ್ 8ರಂದು ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.