ಗುರುವಾರ , ಆಗಸ್ಟ್ 18, 2022
27 °C
ಕನ್ನಡದಲ್ಲಿ ಮೊಟ್ಟಮೊದಲ ವಿಡಿಯೊ ಕವನ

‘ಭಾವ ದ್ಯುತಿ’ ವಿಡಿಯೊ ಕವನ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರ್ವ: ಪದವಿ ಹಂತದಲ್ಲಿ ಪಠ್ಯಕ್ರಮಕ್ಕೆ ಮಾತ್ರ ಸೀಮಿತಗೊಳ್ಳದೆ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸ್ಪಂದನೆಯ ಗುಣವನ್ನು ಪ್ರೇರೇಪಿಸುವಲ್ಲಿ ಪ್ರಾಧ್ಯಾಪಕರ ಪಾತ್ರ ಮಹತ್ವದ್ದು. ಇದಕ್ಕೆ ಪ್ರೊ. ಭವಾನಿಶಂಕರ್ ಅತ್ಯುತ್ತಮ ನಿದರ್ಶನ. ಕನ್ನಡ ಸಾರಸ್ವತ ಲೋಕಕ್ಕೆ ಹತ್ತು ಹಲವು ಸಂಶೋಧನಾತ್ಮಕ ಅಮೂಲ್ಯ ಕೃತಿಗಳನ್ನು ನೀಡಿದ್ದಾರೆ. ಕನ್ನಡದಲ್ಲಿ ಮೊಟ್ಟಮೊದಲ ವಿಡಿಯೊ ಕವನ ಹೊರ ತಂದ ಸಾಧಕ ಇವರು ಎಂದು ನಿವೃತ್ತ ಕನ್ನಡ ಉಪನ್ಯಾಸಕ, ಸಾಹಿತಿ ಕೆ.ಎಸ್. ಶ್ರೀಧರಮೂರ್ತಿ ತಿಳಿಸಿದ್ದಾರೆ.

ಅವರು ಶಿರ್ವ ಸಂತಮೇರಿ ಕಾಲೇಜು, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌, ಶಿರ್ವ ಸಂತಮೇರಿ ಕಾಲೇಜು ಹಳೆವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ‘ಪ್ರೊ. ಎನ್.ಭವಾನಿಶಂಕರ್ ನೆನಪಿನಲ್ಲಿ... ಭಾವ ದ್ಯುತಿ’ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿ ಮಾತನಾಡಿದರು

ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿರ್ವ ಚರ್ಚ್ ಪ್ರಧಾನ ಧರ್ಮಗುರುಗಳು ಡಾ. ಲೆಸ್ಲಿ ಡಿಸೋಜ ಮಾತನಾಡಿದರು.

ವಿ.ಶಾರದಾ ಭವಾನಿಶಂಕರ್, ಕಾಲೇಜು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ವಿಶ್ವನಾಥ, ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್ ಇದ್ದರು. ಕಸಾಪ ಕಾಪು ತಾಲೂಕು ಘಟಕದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯರಾದ ಡಾ.ಹೆರಾಲ್ಡ್ ಐವನ್ ಮೋನಿಸ್ ಸ್ವಾಗತಿಸಿದರು. ಆಕಾಶವಾಣಿ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಭಾವಾಂಜಲಿ -ಕನ್ನಡ ಗೀತೆಗಳನ್ನು ಹಾಡಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ಯಶೋಧಾ ನಿರೂಪಿಸಿದರು. ಕಸಾಪ ಕಾಪು ಘಟಕದ ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು